ಮಂಗಳೂರು: ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಹೊಸ ತಂಡವನ್ನು ರಾಜ್ಯದಲ್ಲಿ ರಚಿಸಲಾಗಿದ್ದು, ಈ ಪ್ರಕಾರ ಅನುಭವಿ ನಾಯಕ, ಬಿಲ್ಲವ ಸಮಾಜದ ಸತೀಶ್ ಕುಂಪಲ ಅವರಿಗೆ ದ.ಕ. ಜಿಲ್ಲೆಯ ಬಿಜೆಪಿ ಅಧ್ಯಕ್ಷ ಹುದ್ದೆ ದೊರೆತಿದೆ.
Advertisement
1987ರಿಂದ ಬಿಜೆಪಿ ಬೂತ್ ಚಟುವಟಿಕೆ ಆರಂಭಿಸಿ ಸತೀಶ್ 1989ರಲ್ಲಿ ಬಿಜೆಪಿ ಕುಂಪಲ ಬೂತ್ ಪ್ರಧಾನ ಕಾರ್ಯದರ್ಶಿಯಾಗಿ, 1994ರಲ್ಲಿ ಸೋಮೇಶ್ವರ ಗ್ರಾ.ಪಂ.ಕಾರ್ಯದರ್ಶಿಯಾಗಿ, 1999ರಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ಬಿಜೆಪಿ ಕಾರ್ಯದರ್ಶಿ, 2003ರಲ್ಲಿ ಪ್ರಧಾನ ಕಾರ್ಯದರ್ಶಿಯಾದ ಅವರು 2007, 2013 ಹಾಗೂ ಪ್ರಸ್ತುತ ಬಿಜೆಪಿ ದ.ಕ. ಜಿಲ್ಲಾ ಕಾರ್ಯದರ್ಶಿಯಾಗಿದ್ದಾರೆ.
Related Articles
ಕುಂದಾಪುರ: ಬಿಜೆಪಿ ಉಡುಪಿ ಜಿಲ್ಲೆ ಅಧ್ಯಕ್ಷರಾಗಿ ಬಿ. ಕಿಶೋರ್ ಕುಮಾರ್ ಕುಂದಾಪುರ ನೇಮಕವಾಗಿದ್ದಾರೆ.
Advertisement
ಅವರು ಕುಂದಾಪುರ ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ರಾಜ್ಯ ಮೀನುಗಾರಿಕೆ ಪ್ರಕೋಷ್ಠದ ಸಂಚಾಲಕರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಂದರ್ಭ ಭಟ್ಕಳ ಸಹಿತ ವಿವಿಧ ಕ್ಷೇತ್ರಗಳ ಉಸ್ತುವಾರಿಯಾಗಿ, ಬೈಂದೂರು ವಿಧಾನಸಭೆ ಕ್ಷೇತ್ರ ಪ್ರಭಾರಿ ಸಹಿತ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿದ್ದರು.
2013ರಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ತೊರೆದು ಪಕ್ಷೇತರರಾಗಿ ಸ್ಪರ್ಧಿಸಿದಾಗ ಬಿಜೆಪಿ ಅಭ್ಯರ್ಥಿಯಾಗಿ ಕುಂದಾಪುರದಿಂದ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕುಂದಾಪುರ ಅಥವಾಬೈಂದೂರು ಕ್ಷೇತ್ರದ ಅಭ್ಯರ್ಥಿ ಯಾಗಿ ಕಿಶೋರ್ ಕುಮಾರ್ ಹೆಸರು ಮುನ್ನಲೆಯಲ್ಲಿತ್ತು. ಉದ್ಯಮಿಯಾಗಿರುವ ಕಿಶೋರ್ ಕುಮಾರ್ ರಾಜಕೀಯದ ಹೊರತಾಗಿ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿ ಕೊಂಡವರು. ಹೋರಾಟಗಳ ಮುಂಚೂಣಿ ವಹಿಸಿದವರು. ಕುಂದಾ ಪುರ ರೋಟರಾಕ್ಟ್ ಕ್ಲಬ್, ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಸಂಸ್ಥೆಯ ಮೂಲಕ ಸಾಂಸ್ಕೃತಿಕ ರಂಗದಲ್ಲಿಯೂ ನಿರಂತರ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ನಾಗಣ್ಣ ನಶ್ಯ ಮಾಲಕರಾಗಿರುವ ಅವರು ಕುಂದಾಪುರ ಎಪಿಎಂಸಿ ಅಧ್ಯಕ್ಷರಾಗಿದ್ದರು. ರಾಜ್ಯ ಬಿಜೆಪಿ ಮೀನು ಗಾರಿಕೆ ಪ್ರಕೋಷ್ಠದ ಸಂಚಾಲಕರಾಗಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಗಿದ್ದ ಅವರು, ಪ್ರಸ್ತುತ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ಅಧ್ಯಕ್ಷ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ.