ಬೆಳಗಾವಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಗೋಕಾಕದಲ್ಲಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಅಹ್ವಾನ ಮಾಡಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಯಾವುದೇ ಕ್ಷಣದಲ್ಲಿ ಘೋಷಣೆ ಆಗಲಿರುವ ಸಂದರ್ಭದಲ್ಲಿಈ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ:ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ: ಗಂಗಾವತಿ ಭಾಗದ ರೈತರ ಹೊಸ ಪ್ರಯೋಗ
ಅಶೋಕ ಪೂಜಾರಿ ಜೊತೆ ಚರ್ಚೆ ನಡೆಸಿದ ಸತೀಶ ಜಾರಕಿಹೊಳಿ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದರು. ಇದಕ್ಕೆ ಸ್ಪಂದಿಸಿದ ಪೂಜಾರಿ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಕೇಳಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ಸೇರಲು ಅಶೋಕ ಪೂಜಾರಿ ಸೇರಿದಂತೆ ಗೋಕಾಕದ ಹಲವು ಮುಖಂಡರಿಗೆ ಆಹ್ವಾನ ನೀಡಲಾಗಿದೆ. ನಿರ್ಧಾರ ಅವರಿಗೆ ಬಿಡಲಾಗಿದೆ ಎಂದರು.