ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ಜಾಸ್ತಿ ಆಗ್ತಾನೆ ಇದೆ. ಶನಿವಾರ ಕೂಡ ರಾಜ್ಯದಲ್ಲಿ ರಣಕೇಕೆ ಹಾಕಿರುವ ಕೋವಿಡ್ ಮಹಾಮಾರಿ, ಬರೋಬ್ಬರಿ 17,489 ಜನರಿಗೆ ಒಕ್ಕರಿಸಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11,41,998ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ 80 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 13,270ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 11404 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,33,842ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರು ಒಂದರಲ್ಲೇ ಸೋಂಕಿಗೆ 43 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 5565 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,09,549ಕ್ಕೆ ಏರಿಕೆಯಾಗಿದೆ. ಇನ್ನು 1,19,160 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 589 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.