Advertisement

ಶನಿವಾರದ ರಾಶಿ ಭವಿಷ್ಯ : ಈ ರಾಶಿಯವರು ಆರೋಗ್ಯದ ಕಡೆ ಗಮನ ಹರಿಸಿ…

07:22 AM Sep 24, 2022 | Team Udayavani |

ಮೇಷ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವಸ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ. ಹಿರಿಯರ ಆರೋಗ್ಯ ಗಮನಿಸಿ.

Advertisement

ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ. ಮಕ್ಕಳ ವಿಚಾರದಲ್ಲಿ ಜಾಗ್ರತೆ ಇರಲಿ.

ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋ ದ್ಯೋಗಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ: ಸ್ಥಿರ ಬುದ್ಧಿ. ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗೃಹೋಪಕರಣ ವಸ್ತು ಸಂಗ್ರಹ .

Advertisement

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನಸಂಚಯನ. ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಾಧಿಕಾರಿಗಳ ಸಹಕಾರ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ. ಪ್ರೋತ್ಸಾಹ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯರ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಕಂಕಣ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹಿರಿಯರಿಂದ ಉತ್ತಮ ಮಾರ್ಗದರ್ಶನ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next