Advertisement

ಜಮ್ಮು : ಪೊಲೀಸ್ ಠಾಣೆಯಲ್ಲಿ ಭಾರಿ ಬೆಂಕಿ ; ಹಲವು ವಾಹನ ಭಸ್ಮ

12:56 PM Jun 05, 2022 | Team Udayavani |

ಜಮ್ಮು : ಇಲ್ಲಿನ ಸತ್ವಾರಿ ಪೊಲೀಸ್ ಠಾಣೆಯಲ್ಲಿ ಶನಿವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು,ಠಾಣೆಯಲ್ಲಿ ನಿಲ್ಲಿಸಿದ್ದ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Advertisement

ಪೊಲೀಸ್ ಠಾಣೆಯ ಹೊರಗಿನ ತೆರೆದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಶಪಡಿಸಿಕೊಂಡ ವಾಹನಗಳು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಹಾಯದಿಂದ ಬೆಂಕಿಯನ್ನು ನಿಯಂತ್ರಿಸಲಾಯಿತು. ಪೊಲೀಸ್ ಠಾಣೆ ಕಟ್ಟಡಕ್ಕೆ ಯಾವುದೇ ಹಾನಿ ಸಂಭವಿಸಿಲ್ಲಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next