Advertisement

Delhi ಬಂಧಿತ ಆಪ್ ನಾಯಕ ಸತ್ಯೇಂದ್ರ ಜೈನ್ ಆಸ್ಪತ್ರೆಗೆ

04:10 PM May 22, 2023 | Team Udayavani |

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರನ್ನು ಬೆನ್ನುಮೂಳೆಯ ಸಮಸ್ಯೆಗಾಗಿ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸೋಮವಾರ ವೈದ್ಯರು ಪರೀಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಶನಿವಾರ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅವರು ಎರಡನೇ ಅಭಿಪ್ರಾಯವನ್ನು ಬಯಸಿದ್ದರಿಂದ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮಾಜಿ ಕ್ಯಾಬಿನೆಟ್ ಸಹೋದ್ಯೋಗಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿ ”ಜೈನ್ ಅವರ ಉತ್ತಮ ಆರೋಗ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ, ದೆಹಲಿಯ ಜನರು ಬಿಜೆಪಿಯ ದುರಹಂಕಾರ ಮತ್ತು ದೌರ್ಜನ್ಯವನ್ನು ನೋಡುತ್ತಿದ್ದಾರೆ, ಈ ದಬ್ಬಾಳಿಕೆಗಾರರನ್ನು ದೇವರು ಸಹ ಕ್ಷಮಿಸುವುದಿಲ್ಲ, ಈ ಹೋರಾಟದಲ್ಲಿ, ಜನರು ನಮ್ಮೊಂದಿಗಿದ್ದಾರೆ ಮತ್ತು ದೇವರು ನಮ್ಮ ಜತೆಗಿದ್ದಾನೆ. ನಾವು ಭಗತ್ ಸಿಂಗ್ ಅವರ ಅನುಯಾಯಿಗಳು. ದಬ್ಬಾಳಿಕೆ, ಅನ್ಯಾಯ ಮತ್ತು ಸರ್ವಾಧಿಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ”ಎಂದು ಟ್ವೀಟ್ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜೈನ್ ಅವರನ್ನು ಬಂಧಿಸಿದ ನಂತರ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next