ರಿಯಾದ್:ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಕ್ಷಿಪ್ರವಾಗಿ ಹರಡುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಒಂದು ವಾರಗಳ ಕಾಲ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದೆ.
ಅಪರೂಪದ ಘಟನೆ ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳನ್ನು ತಾತ್ಕಾಲಿಕವಾಗಿ ಇನ್ನೂ ಒಂದು ವಾರಗಳ ಕಾಲ ಸಂಚಾರ ನಿಷೇಧಿಸಲಾಗಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ತಿಳಿಸಿದೆ.
ಭೂ ಹಾಗೂ ಸಮುದ್ರದ ಮೂಲಕವೂ ಸೌದಿ ಅರೇಬಿಯಾಕ್ಕೆ ಒಂದು ವಾರಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸೌದಿ ಆಂತರಿಕ ಸಚಿವಾಲಯ ಹೇಳಿದೆ.
ಇದನ್ನೂ ಓದಿ:ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಶ್ರೀಧರ್ ಡಿ.ಎಸ್ ಗೆ ಪಾರ್ತಿಸುಬ್ಬ ಪ್ರಶಸ್ತಿ
ಈ ನಿಷೇಧ ಸರಕು ಸಾಗಣೆ ವಿಮಾನ ಸಂಚಾರಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ. ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಪತ್ತೆಯಾದ ನಿಟ್ಟಿನಲ್ಲಿ ಹಲವು ಯುರೋಪ್ ದೇಶಗಳು ಬ್ರಿಟನ್ ಪ್ರಜೆಗಳು ಪ್ರವೇಶ ನಿಷೇಧಿಸಿದ ನಂತರ ಈ ಬೆಳವಣಿಗೆ ನಡೆದಿದೆ.