Advertisement

ಸವದತ್ತಿ ಶ್ರೀ ಯಲ್ಲಮ್ಮ ದೇವಸ್ಥಾನ ಮತ್ತೆ ಒಂದು ತಿಂಗಳ ಕಾಲ ಬಂದ್

06:32 PM Oct 01, 2020 | sudhir |

ಬೆಳಗಾವಿ: ಕೋವಿಡ್ ಸೋಂಕು ಹರಡದಂತೆ ಸಾರ್ವಜನಿಕರ ಹಾಗೂ ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಚಿಂಚಲಿಯ ಶ್ರೀ ಮಾಯಕ್ಕಾ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಅ. 31ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

Advertisement

ಸವದತ್ತಿಯ ಶ್ರೀ ಯಲ್ಲಮ್ಮ ದೇವಸ್ಥಾನ, ಚಿಂಚಲಿಯ ಶ್ರೀ ಮಾಯಕ್ಕಾ ದೇವಸ್ಥಾನ ಹಾಗೂ ಜೋಗುಳಬಾವಿ ಸತ್ಯೆವ್ವ ದೇವಸ್ಥಾನಕ್ಕೆ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ದರ್ಶನ ವೇಳೆ ಸೋಂಕು ಹರಡುವ ಮೂಲಕ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸಾರ್ವಜನಿಕ ದರ್ಶನ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನ ಆಡಳಿತ ಮಂಡಳಿಯವರು ಈ ದೇವಸ್ಥಾನಗಳಲ್ಲಿ ಎಲ್ಲ ಮುಂಜಾಗ್ರತ ಕ್ರಮ ಕೈಗೊಂಡು ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಕೈಗೊಂಡಿದ್ದಾರೆ. ಸಾಮಾನ್ಯವಾಗಿ ಪ್ರತಿ ವರ್ಷ ದಸರಾ ಹಬ್ಬದಲ್ಲಿ ದೇವಸ್ಥಾನಗಳಿಗೆ ಲಕ್ಷಾಂತರ ಭಕ್ತರು ದೀಪ ಹಚ್ಚಲು ಆಗಮಿಸುತ್ತಾರೆ.

ಇದನ್ನೂ ಓದಿ : ದೆಹಲಿ ಗಲಭೆ: ಜೆಎನ್ ಯು ಹಳೆ ವಿದ್ಯಾರ್ಥಿ ಉಮರ್ ಮತ್ತೆ ಬಂಧನ, 3 ದಿನ ಪೊಲೀಸ್ ವಶಕ್ಕೆ

ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ದೇವಿಯ ದರ್ಶನ ಪಡೆಯುವುದು ಸಾಮಾನ್ಯ. ಆದರೆ ಈ ವರ್ಷ ಕೊರೊನಾದಿಂದಾಗಿ ಸಾರ್ವಜನಿಕರಿಗೆ ದರ್ಶನ ಇಲ್ಲದೇ ಭಕ್ತರಿಗೆ ನಿರಾಸೆಯನ್ನುಂಟು ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next