Advertisement

ಸವದಿಯಿಂದ ಇಂದು ನಾಮಪತ್ರ ಸಲ್ಲಿಕೆ

11:38 PM Feb 04, 2020 | Lakshmi GovindaRaj |

ಬೆಂಗಳೂರು: ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್‌ ಸದಸ್ಯ ರಿಜ್ವಾನ್‌ ಅರ್ಷದ್‌ ಅವರಿಂದ ತೆರವಾದ ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ನಾಮಪತ್ರ ಸಲ್ಲಿಸಲಿದ್ದಾರೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಜ್ವಾನ್‌ ಅರ್ಷದ್‌ ಜಯ ಸಾಧಿಸಿದ್ದರು.

Advertisement

ಮೇಲ್ಮನೆ ಸದಸ್ಯರೂ ಆಗಿದ್ದರಿಂದ ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಫೆ.17ರಂದು ನಡೆಯಲಿರುವ ವಿಧಾನ ಪರಿಷತ್‌ ಉಪಚುನಾವಣೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿಯೇ ಲಕ್ಷ್ಮಣ ಸವದಿಯವರಿಗೆ ಉಪಮುಖ್ಯಮಂತ್ರಿ ಹುದ್ದೆಯ ಜತೆಗೆ ಸಾರಿಗೆ ಇಲಾಖೆ ನೀಡಲಾಗಿದೆ.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿಯವರು ಅಂದಿನ ಕಾಂಗ್ರೆಸ್‌ ಅಭ್ಯರ್ಥಿ (ಈಗ ಬಿಜೆಪಿ ಶಾಸಕ) ಮಹೇಶ್‌ ಕುಮಟಳ್ಳಿ ವಿರುದ್ಧ ಸೋತಿದ್ದರು. ಆದರೂ, ಬಿಜೆಪಿ ಸರ್ಕಾರ ರಚನೆಯಾದಾಗ ಲಕ್ಷ್ಮಣ ಸವದಿಯನ್ನು ಸಚಿವರನ್ನಾಗಿ ಮಾಡಲಾಗಿದೆ. ಫೆ.26ರೊಳಗೆ ಅವರು ಪರಿಷತ್‌ನ ಸದಸ್ಯರಾಗ ಬೇಕಿರುವುದರಿಂದ ನಾಮಪತ್ರವನ್ನು ಬಿಜೆಪಿ ವರಿಷ್ಠರ ಸೂಚನೆಯಂತೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next