Advertisement
ಸರ್ಕಾರವೂ ಈ ಬಗ್ಗೆ ಅಂತಿಮ ಆದೇಶ ನೀಡಬೇಕಿರುವ ಹಿನ್ನೆಲೆಯಲ್ಲಿ ಯಾವುದೇ ಹೆಸರನ್ನು ಅಂತಿಮ ಮಾಡಿಲ್ಲ ಎಂದರು. ಇನ್ನು ಕೊರೊನಾ ಭೀತಿ ಹಾಗೂ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿ ದೆ ಎಂದು ಆಯುಕ್ತರು ಸ್ಪಷ್ಟಪಡಿಸಿದರು. ಬುಧವಾರ ವಿವಿಧ ರಾಜಕೀಯ ಪಕ್ಷದ ನಾಯಕರು ಹಾಗೂ ಕೆಲವು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು.
Related Articles
Advertisement
ಕಾಂಗ್ರೆಸ್ ನಾಯಕರಿಂದ ವಾಗ್ಧಾಳಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರನ್ನು ನಗರದ ಮೇಲ್ಸೇತುವೆಗೆ ಇಡುವ ಸಂಬಂಧ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿರುವುದು ಆಡಳಿತ ಹಾಗೂ ಪ್ರತಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ. ಕಾಂಗ್ರೆಸ್ ವಾಗ್ಧಾಳಿ ನಡೆಸಿದ್ದರೆ, ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಈ ನಿರ್ಧಾರ ಮಣ್ಣಿನ ಮಕ್ಕಳಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದ್ದಾರೆ.
ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡುವಂತೆ ಆಗ್ರಹಿಸಿದ್ದಾರೆ. ಮಾಜಿ ಕೆಪಿಸಿಎ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇಲ್ಮನೆ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮೊದಲಾದ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗೆ ತಿರುಗೇಟು ನೀಡಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಾವರ್ಕರ್ ಹೆಸರು ಬದಲು ಸೋನಿಯಾ ಗಾಂಧಿ ಹೆಸರಿಡಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರೂ ನೇರವಾಗಿ ಸಿದ್ದರಾಮಯ್ಯ ವಿರುದಟಛಿ ವಾಗ್ಧಾಳಿ ನಡೆಸಿದ್ದು, ರಾಜ್ಯದ ವಿಶ್ವ ವಿದ್ಯಾಲಯಗಳು, ಆಸ್ಪತ್ರೆಗಳು, ರಸ್ತೆಗಳಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಹೆಸರಿಡುವಾಗ ಮಣ್ಣಿನ ಮಕ್ಕಳು ನೆನಪಾಗಲಿಲ್ಲವೇ ಎಂದು ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿಯ ಬಹುತೇಕ ನಾಯಕರು ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿದ್ದಾರೆ.