ದೇವನಹಳ್ಳಿ: ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪರಂಪರೆವಿಶ್ವ ಮಾನ್ಯತೆ ಲಭಿಸಿದೆ. ವಿಶ್ವದಲ್ಲಿಕನ್ನಡ ಭಾಷಾ ಲಿಪಿಗೆ ಸ್ಥಾನಮಾನನೀಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷಕೆ.ಸಿ.ಮಂಜುನಾಥ್ ತಿಳಿಸಿದರು.
ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವೆಲ್‌ನಲ್ಲಿ ಬೆಂಗಳೂರು ವಿಮಾನ ನಿಲ್ದಾಣ, ಕರ್ನಾಟಕ ಪ್ರವಾಸೋದ್ಯಮ ಟ್ಯಾಕ್ಸಿ ಚಾಲಕರ ಸಂಘದಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿ, ಜಾಗತೀಕರಣದ ಪ್ರಭಾವದಿಂದ ಕನ್ನಡದಲ್ಲಿಯೇ ಕನ್ನಡ ಭಾಷೆ ಉಳಿವಿಗೆ ಹೋರಾಟ ಅನಿವಾರ್ಯವಾಗಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವದ ಮೂಲಕ ಬೇರೆ ರಾಜ್ಯ, ರಾಷ್ಟ್ರಗಳ ಪ್ರಯಾಣಿಗರಿಗೆ ಕನ್ನಡ ಭಾಷೆ ಬಗ್ಗೆ ಅರಿವು ಮೂಡಿಸಿದಂತಾಗಿದೆ ಎಂದು ಹೇಳಿದರು. ಕೊರೊನಾ ಬಗ್ಗೆ ಉದಾಸೀನ ಬೇಡ: ಇಡೀ ಪ್ರಪಂಚವನ್ನೇ ಕೊರೊನಾ ಆವರಿಸಿದೆ. ಇದರ ಬಗ್ಗೆ ಯಾರು ಉದಾಸೀನತೆ ಮಾಡಬಾರದು. ರೋಗದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಂಡರೆ ರೋಗ ಮುಕ್ತವಾಗಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ:ನಿವಾರ್ ಚಂಡಮಾರುತ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ, ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ
ಕೆಎಸ್‌ಡಿಸಿ ಉಪಾಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ನೀಲಕಂಠಪ್ಪ, ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಕೇಬಲ್ ಬಾಬು, ಬಿಎಐಎಲ್‌ನ ಆಡಳಿತ ಮಂಡಳಿಯ ಅಧಿಕಾರಿಗಳು ಹಾಜರಿದ್ದರು.