Advertisement
ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನ ಮತ್ತು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಬಳಿಕ ದೇಗುಲದ ಬಳಿಯಿರುವ ಕೆಂಪೇಗೌಡರ ಪ್ರತಿಮೆಗೆ ಗೌರವ ಸಲ್ಲಿಸಿ ಪಾದಯಾತ್ರೆ ಆರಂಭಿಸಲಾಯಿತು.
Related Articles
ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಕಾಂಗ್ರೆಸ್ ಪತ್ರಿಕಾಗೋಷ್ಠಗಳನ್ನು ನಡೆಸುವ ಮೂಲಕ ತಿರುಗೇಟು ನೀಡಲು ಸಜ್ಜಾಗಿದೆ. ಇಂದು ಸಂಜೆ ಸಚಿವ ಕೆ.ಜೆ.ಜಾರ್ಜ್ ಸುದ್ದಿಗೋಷ್ಠಿ ನಡೆಸಲ್ಲಿದ್ದು, ನಾಳೆ ಸಚಿವರಾದ ಯು.ಟಿ.ಖಾದರ್ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ.
Advertisement
ಪ್ರತಿಭಟನೆ;ಪೊಲೀಸರ ತಡೆ
ಬಿಜೆಪಿ ಪಾದಯಾತ್ರೆ ವಿರುದ್ಧ ಹನುಮಂತನಗರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದು ಅವರನ್ನು ಪೊಲೀಸರು ತಡೆದಿದ್ದಾರೆ.
ಜೆಡಿಎಸ್‌ನಿಂದಲೂ ಪಾದಯಾತ್ರೆಬೆಂಗಳೂರು ನಗರಕ್ಕೆ ಜೆಡಿಎಸ್ ಕೊಡುಗೆಗಳು ಎಂಬ ಹೆಸರಿನಲ್ಲಿ ಬಸವನಗುಡಿ ದೊಡ್ಡಗಣಪತಿ ದೇವಾಲಯದಿಂದ ಜೆಡಿಎಸ್ 10 ದಿನಗಳ ಕಾಲ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಮಾರ್ಚ್ 6 ರಿಂದ 16 ರ ವರೆಗೆ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆಯಲಿದೆ.