Advertisement

ಲಲಿತ ಕಲಾ ಕಾಲೇಜು ಉಳಿಸಿ

11:17 AM Sep 16, 2018 | |

ಮೈಸೂರು: ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕ್ಷೀಣಿಸುತ್ತಿರುವುದರಿಂದ ಲಲಿತ ಕಲಾ ಕಾಲೇಜಿಗೆ ಆದ್ಯತೆ ಕಡಿಮೆಯಾಗುತ್ತಿದೆ ಎಂದು ಮೈಸೂರು ವಿಶ್ವದ್ಯಾಲಯದ ಕುಲಪತಿ ಟಿ.ಕೆ. ಉಮೇಶ್‌ ಆತಂಕ ವ್ಯಕ್ತಪಡಿಸಿದರು. ಮೈಸೂರು ವಿಶ್ವವಿದ್ಯಾಲಯದ ಲಲಿತ ಕಲಾ ಕಾಲೇಜು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಮೈಸೂರು ವಿವಿ ಅವಿಭಾಜ್ಯ ಅಂಗವಾಗಿರುವ ಲಲಿತ ಕಲಾ ಕಾಲೇಜು, ಕೇವಲ ಸಂಗೀತಕ್ಕೆ ಮಾತ್ರವಲ್ಲದೇ ಕಲೆ, ಸಾಹಿತ್ಯ, ನಾಟಕದ ಜತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಅವಕಾಶ ನೀಡುತ್ತಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಲಲಿತ ಕಲಾ ಕಾಲೇಜಿಗೆ ಸೇರಬೇಕಿದೆ.

ಆ ಮೂಲಕ ಕಾಲೇಜನ್ನು ಬೆಳೆಸಲು ಚಿಂತನೆ ನಡೆಸಿ, ಇದಕ್ಕಾಗಿ ಪ್ರತಿಯೊಬ್ಬರೂ ಸಹಕಾರ ನೀಡಬೇಕಿದೆ. ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ರಾಮಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಯಶಸ್ಸು ಪಡೆಯಬಹುದು.

ಇದಕ್ಕಾಗಿ ನಿರ್ದಿಷ್ಟ ಗುರಿಯೊಂದಿಗೆ ಮುನ್ನಡೆಯುವ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗಬೇಕಿದೆ. ಆದರೆ, ಕೇವಲ ಕಲೆಯಲ್ಲಿ ಮಾತ್ರವಲ್ಲದೆ, ಜೀವನ ನಿರ್ವಹಣೆಗೆ ಉದ್ಯೋಗವನ್ನು ಹುಡುಕಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಲಲಿತ ಕಲಾ ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next