Advertisement

ಜಾನಪದ ಕಲೆ-ಸಂಸ್ಕೃತಿ ಉಳಿಸಿ: ಶಾಸಕ ಪಾಟೀಲ್‌

03:24 PM Jan 16, 2021 | Team Udayavani |

ಅಫಜಲಪುರ: ಗ್ರಾಮೀಣ ಪ್ರದೇಶದಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ-ಬೆಳೆಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಜರುಗಬೇಕು ಎಂದು ಶಾಸಕ ಎಂ.ವೈ ಪಾಟೀಲ್‌ ಹೇಳಿದರು. ತಾಲೂಕಿನ ಘೂಳನೂರ ಗ್ರಾಮದ ಸಿದ್ಧರಾಮೇಶ್ವರ ಹಿರೇಮಠದಲ್ಲಿ ಸಂಕ್ರಮಣದ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಬುರಗಿ ವತಿಯಿಂದ ಆಯೋಜಿಸಿದ್ದ 2020-2021ನೇ ಸಾಲಿನ ಸುಗ್ಗಿ-ಹುಗ್ಗಿ ಕಾರ್ಯಕ್ರಮದಲ್ಲಿ
ಅವರು ಮಾತನಾಡಿದರು.

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ಇಂತಹ ವಿನೂತನ ಕಾರ್ಯಕ್ರಮಗಳು ಕಲೆಯನ್ನು ಜೀವಂತವಾಗಿ ಉಳಿಸುವುದರೊಂದಿಗೆ
ಹೊಸ ಪ್ರತಿಭೆಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪೂರಕವಾಗಿವೆ.ಇಂದಿನ ಯುವಕರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಗುರುತಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂರ ಮಾತನಾಡಿ, ನಮ್ಮ ಪೂರ್ವಜರು ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ನಶಿಸಿ ಹೋಗದಂತೆ ಉಳಿಸಿಕೊಂಡು ಬಂದಿದ್ದಾರೆ. ಹೀಗಾಗಿ ಅವರ ಉಳಿಸಿ- ಬೆಳೆಸಿದ ಜಾನಪದ ಕಲೆಗಳನ್ನು ಬೆಳೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಲಿ ಎಂದರು.

ಇದನ್ನೂ ಓದಿ:ಶರಣ ಸಂಸ್ಥಾನದಿಂದ 25 ಲಕ್ಷ ರೂ. ದೇಣಿಗೆ; ಡಾ| ಶರಣಬಸವಪ್ಪ ಅಪ್ಪ

ಸಾನ್ನಿಧ್ಯ ವಹಿಸಿದ್ದ ಕಲಬುರಗಿಯ ಸುಲಫುಲ ಮಠದ ಡಾ| ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು, ಅತನೂರಿನ ಅಭಿನವ ಗುರುಬಸವ ಶಿವಾಚಾರ್ಯರು, ಚೌದಾಪುರಿ ಹಿರೇಮಠದ ರಾಜಶೇಖರ ಶಿವಾಚಾರ್ಯರು ಮಾತನಾಡಿ, ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ಇಂತಹ ಕಾರ್ಯಕ್ರಮಗಳ ಆಯೋಜನೆ ಮಾಡುತ್ತಿರುವುದು ಒಳ್ಳೆಯದು. ಹೀಗಾಗಿ ಸಾರ್ವಜನಿಕರು ಇಂತ ಕಾರ್ಯಕ್ರಮಗಳಿಗೆ ಸಹಕಾರ ನೀಡಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

Advertisement

ವಿಧಾನ ಪರಿಷತ್‌ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ತಾಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಜಿಪಂ ಮಾಜಿ ಸದಸ್ಯ ಪ್ರಕಾಶ ಜಮಾದಾರ, ಉದ್ದಿಮೆದಾರ ಅಶೋಕ ಗುತ್ತೇದಾರ, ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಿದ್ದಯ್ಯ ಆಕಾಶಮಠ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಕಲಾವಿದರು ಸುಗಮ ಸಂಗೀತ, ವಚನ ಗಾಯನ, ಗಜಲ್‌ ಗಾಯನ, ತತ್ವಪದ, ಜಾನಪದ ಗೀತೆ, ದಾಸವಾಣಿ, ಕೊಳಲು ವಾದನ, ವಾಯಲಿನ್‌, ಸೋಬಾನ ಪದಗಳು, ಸಿತಾರ ವಾದನ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ತಬಲಾ ಸೋಲೊ, ಕಥಾ ಕೀರ್ತನ ನಡೆಸಿಕೊಟ್ಟರು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 10 ಜಾನಪದ ಕಲಾ ತಂಡಗಳು ಪೂಜಾ ಕುಣಿತ, ಮಹಿಳಾ ವೀರಗಾಸೆ, ಲಂಬಾಣಿ ನೃತ್ಯ, ಪುರವಂತಿಕೆ ಮುಂತಾದ ಕಲೆಗಳನ್ನು ಪ್ರದರ್ಶನ ಮಾಡಿದರು. ಕಾರ್ಯಕ್ರಮಕ್ಕೂ ಮುನ್ನ ಸುಗ್ಗಿ ಹುಗ್ಗಿಯ ಮೆರವಣಿಗೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ
ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next