Advertisement
ಈ ಮಧ್ಯೆ ಮಹಾರಾಷ್ಟ್ರ ಹಾಗೂ ರಾಜ್ಯದ ಕೆಲ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಈ ಮಧ್ಯೆ ಪ್ರವಾಹ ಪರಿಸ್ಥಿತಿ ಕುರಿತು ರಾಜ್ಯ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡ ಶನಿವಾರ ಸಂಜೆ ವಿಡಿಯೋ ಸಂವಾದ ಮಾಡಿ, ಪ್ರವಾಹ ಪರಿಸ್ಥಿತಿ ಮಾಹಿತಿ ಪಡೆದಿದೆ.
Related Articles
Advertisement
ಜಿಲ್ಲಾಡಳಿತ ಶುಕ್ರವಾರ ಸಂಜೆಯಿಂದಲೇ ಕೃಷ್ಣಾ ನದಿ ತೀರ ಪ್ರದೇಶದ ಹಳ್ಳಿಗಳಲ್ಲಿ ಡಂಗೂರ ಸಾರುತ್ತಿದೆ. ಮಕ್ಕಳು, ಮಹಿಳೆಯರು ಹಾಗೂ ಜಾನುವಾರು ನದಿ ತೀರಕ್ಕೆ ಹೋಗದಂತೆ ಜಾಗೃತಿ ಮೂಡಿಸುತ್ತಿದ್ದು, ನದಿಗೆ ಹೆಚ್ಚಿನ ನೀರು ಹರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.
ವಿಜಯಪುರ ಜಿಲ್ಲೆಯಲ್ಲಿ ಜಮೀನಿಗೆ ನೀರು ನುಗ್ಗಿದ್ದರೂ ಜನವಸತಿ ಪ್ರದೇಶಕ್ಕೆ ನೀರು ನುಗ್ಗುವ ಹಾಗೂ ನಡುಗಡ್ಡೆ ಪ್ರದೇಶಗಳು, ವಸ್ತಿ ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಇಲ್ಲ. ಆದಾಗ್ಯೂ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ವಿವಿಧ ತಹಶೀಲ್ದಾರ್ ಹಾಗೂ ಸಂಭಾವ್ಯ ಪ್ರವಾಹ ಪೀಡಿತ ಹಳ್ಳಿಗಳ ಕಂದಾಯ ಅಧಿಕಾರಿ-ಸಿಬ್ಬಂದಿಗೆ ರವಿವಾರ ಸೇರಿದಂತೆ ರಜೆ ರಹಿತವಾಗಿ ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಲು ಸೂಚಿಸಿದೆ. ಇದಲ್ಲದೇ ಪ್ರವಾಹ ಪರಿಸ್ಥಿತಿ ಉಂಟಾಗಿ ಜನವತಿ ಪ್ರದೇಶಕ್ಕೆ ನೀರು ನುಗ್ಗಿದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಅಗ್ನಿಶಾಮಕ ಹಾಗೂ ತಾಲೂಕ ಆಡಳಿತದ ಬಳಿ 4 ಬೋಟ್‌ಗಳನ್ನು ಸಿದ್ಧವಾಗಿ ಇರಿಸಿಕೊಂಡಿವೆ.
ಮತ್ತೂಂದೆಡೆ ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆ ದೋರಿದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ವಿಜಯಪುರ, ಬೆಳಗಾವಿ, ಬಾಗಲಕೋಟೆ ಹಾಗೂ ರಾಯಚೂರು ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ. ಅಲ್ಲದೇ ಸಂಭಾವ್ಯ ಪ್ರವಾಹ ಎದುರಿಸಲು ಜಿಲ್ಲಾಡಳಿತಗಳು ಸನ್ನದ್ಧ ಸ್ಥಿತಿಯಲ್ಲಿ ಇರಬೇಕು. ಆಗತ್ಯ ಎನಿಸಿದಲ್ಲಿ ಸರ್ಕಾರಕ್ಕೆ ಮಾಹಿತಿ ನೀಡಿದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬೀಡು ಬಿಟ್ಟಿರುವ ಎನ್‌ಡಿಆರ್‌ಎಫ್ ತಂಡಗಳನ್ನು ನೆರವಿಗೆ ಕಳಿಸಲು ಸಿದ್ಧ ಎಂಬ ಸಂದೇಶವನ್ನೂ ನೀಡಿದ್ದಾರೆ.
• ನಿಡಗುಂದಿ, ಮುದ್ದೇಬಿಹಾಳ ತಾಲೂಕಿನ 15 ಹಳ್ಳಿ ಜಮೀನುಗಳಿಗೆ ನುಗ್ಗಿದ ಹಿನ್ನೀರು
• 20 ಹಳ್ಳಿ ಜಮೀನುಗಳಿಗೆ ನೀರು ನುಗ್ಗುವ ಸಾಧ್ಯತೆ-ಜನವಸತಿ ಪ್ರದೇಶಕ್ಕಿಲ್ಲ ಅಪಾಯ
• ನಾಲ್ಕು ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಉನ್ನತ ಮಟ್ಟದ ಅಧಿಕಾರಿಗಳ ವಿಡಿಯೋ ಸಂವಾದ
• ಜಿಲ್ಲೆಯಲ್ಲಿ 4 ಬೋಟ್‌ಗಳ ಸಹಿತ ಅಧಿಕಾರಿಗಳ ತಂಡ ಪರಿಸ್ಥಿತಿ ಎದುರಿಸಲು ಸನ್ನದ್ಧ
• ಪರಿಸ್ಥಿತಿ ಕೈ ಮೀರಿದರೆ ಎನ್‌ಡಿಅರ್‌ಎಫ್ ತಂಡ ಕರೆಯಿಸಲು ರಾಜ್ಯ ಸರ್ಕಾರ ಚಿಂತನೆ
ವಾಟ್ಸ್‌ಆ್ಯಪ್ ಗ್ರೂಪ್ ಸಮನ್ವಯ:
ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆ ಹಾಗೂ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ, ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ನದಿ ಪಾತ್ರದಲ್ಲಿ ಮಳೆ, ಜಲಾಶಯಗಳಿಗೆ ಇರುವ ಒಳ-ಹೊರ ಹರಿವಿನ ಪ್ರಮಾಣ, ನದಿಯಲ್ಲಿ ಉಂಟಾಗಬಹುದಾದ ಸಂಭಾವ್ಯ ಪ್ರವಾಹ ಪರಿಸ್ಥಿತಿ ಕುರಿತು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ವಾಟ್ಸ್‌ಆ್ಯಪ್ ಗ್ರೂಪ್ ಮಾಡಿಕೊಂಡು ಸಮನ್ವಯ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಕೃಷ್ಣಾ ನದಿಯಲ್ಲಿನ ಒಳ-ಹೊರ ಹರಿವಿನ ಪ್ರಮಾಣ ಆಧರಿಸಿ ಪ್ರತಿ ಅರ್ಧ ಗಂಟೆಗೊಮ್ಮೆ ಮಾಹಿತಿ ಪಡೆಯಲಾಗುತ್ತದೆ. 123 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಶಾಸ್ತ್ರಿ ಜಲಾಶಯದಲ್ಲಿ 102 ಟಿಎಂಸಿ ನೀರು ಸಂಗ್ರಹಿಸಿ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತದೆ. ಒಳಹರಿನ ಪ್ರಮಾಣ ಕಡಿಯೆಯಾದಲ್ಲಿ ಜಲಾಶಯದಲ್ಲಿ ಪೂರ್ಣ ಪ್ರಮಾಣದ ನೀರು ಸಂಗ್ರಹಿಲಾಗುತ್ತದೆ.• ವೈ.ಎಸ್. ಪಾಟೀಲ, ಡಿಸಿ
•ಜಿ.ಎಸ್.ಕಮತರ