Advertisement

1991ರ ಆರಾಧನಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಅರ್ಜಿ: ಡಿ.12ರಂದು ತ್ರಿಸದಸ್ಯ ಪೀಠದಿಂದ ವಿಚಾರಣೆ

07:10 PM Dec 07, 2024 | Team Udayavani |

ಹೊಸದಿಲ್ಲಿ: 1947 ಆಗಸ್ಟ್ 15 ರಂದು ಚಾಲ್ತಿಯಲ್ಲಿದ್ದ ಪೂಜಾ ಸ್ಥಳವನ್ನು ಹಿಂಪಡೆಯಲು ಅಥವಾ ಅದರ ಸ್ವರೂಪದಲ್ಲಿ ಬದಲಾವಣೆಯನ್ನು ಕೋರಲು ಮೊಕದ್ದಮೆ ಹೂಡುವುದನ್ನು ನಿಷೇಧಿಸುವ 1991 ರ ಕಾನೂನಿನ ಕೆಲವು ನಿಬಂಧನೆಗಳ ಸಿಂಧುತ್ವವನ್ನು ಪ್ರಶ್ನಿಸುವ PIL ಗಳ ನ್ನು ಆಲಿಸಲು ಸುಪ್ರೀಂ ಕೋರ್ಟ್ ವಿಶೇಷ ಪೀಠವನ್ನು ರಚಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ ವಿಶ್ವನಾಥನ್ ಅವರ ತ್ರಿಸದಸ್ಯ ಪೀಠವು ಡಿ. 12 ರಂದು ಮಧ್ಯಾಹ್ನ 3:30 ಕ್ಕೆ ಪ್ರಕರಣದ ವಿಚಾರಣೆಯನ್ನು ನಡೆಸುವ ಸಾಧ್ಯತೆಯಿದೆ.

ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ರ ಸೆಕ್ಷನ್ 2, 3 ಮತ್ತು 4 ಅನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಅರ್ಜಿಯನ್ನು ಒಳಗೊಂಡಂತೆ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಲಿದೆ.

ಸಲ್ಲಿಸಿದ ವಿವಿಧ ಕಾರಣಗಳಲ್ಲಿ ಈ ನಿಬಂಧನೆಗಳು ಯಾವುದೇ ವ್ಯಕ್ತಿ ಅಥವಾ ಧಾರ್ಮಿಕ ಗುಂಪಿನ ಪೂಜಾ ಸ್ಥಳವನ್ನು ಮರುಪಡೆಯಲು ನ್ಯಾಯಾಂಗ ಪರಿಹಾರದ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂಬ ವಾದವನ್ನು ಹೊಂದಿದೆ.

1991ರ ಕಾನೂನಿನ ನಿಬಂಧನೆಗಳ ವಿರುದ್ಧ ರಾಜ್ಯಸಭಾ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಗಳು ಸೇರಿ ಒಟ್ಟು ಆರು ಅರ್ಜಿಗಳನ್ನು ಸಲ್ಲಿಸಲಾಗಿದೆ.

Advertisement

1991 ರ ಕಾನೂನು ಯಾವುದೇ ಪೂಜಾ ಸ್ಥಳದ ಪರಿವರ್ತನೆಯನ್ನು ನಿಷೇಧಿಸುತ್ತದೆ ಮತ್ತು 1947 ಆಗಸ್ಟ್ 15 ರಂದು ಅಸ್ತಿತ್ವದಲ್ಲಿದ್ದಂತೆ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಕಾಪಾಡಿಕೊಳ್ಳಲು ಅವಕಾಶ ಒದಗಿಸುತ್ತದೆ. ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ವಿನಾಯಿತಿ ನೀಡಿದ್ದನ್ನು ಉಲ್ಲೇಖಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next