ನವದೆಹಲಿ: 1994ರ ಇಸ್ರೋ ಬೇಹುಗಾರಿಕೆ ಕೇಸಲ್ಲಿ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಸಿಲುಕಿಸಿರುವ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಕೇರಳ ಹೈಕೋರ್ಟ್ ನೀಡಿದ್ದ ಆದೇಶವನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಸುಪ್ರೀಂ ಕೋರ್ಟ್ ನ್ಯಾ.ಎಂ.ಆರ್.ಶಾ ಮತ್ತು ನ್ಯಾ.ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠವು, ಈ ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ವರ್ಗಾಯಿಸಿದ್ದು, ಹೊಸದಾಗಿ ಇಡೀ ಪ್ರಕರಣವನ್ನು ಪರಿಗಣಿಸಿ 4 ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದೆ.
ಜತೆಗೆ, ಹೈಕೋರ್ಟ್‌ನಿಂದ ಗುಜರಾತ್‌ನ ನಿವೃತ್ತ ಡಿಜಿಪಿ ಆರ್.ಬಿ.ಶ್ರೀಕುಮಾರ್, ಕೇರಳದ ಇಬ್ಬರು ಮಾಜಿ ಪೊಲೀಸ್ ಅಧಿಕಾರಿಗಳಾದ ಎಸ್.ವಿಜಯನ್, ಥಂಪಿ ಎಸ್. ದುರ್ಗಾ ದತ್ ಮತ್ತು ನಿವೃತ್ತ ಗುಪ್ತಚರ ಅಧಿಕಾರಿ ಪಿ.ಎಸ್.ಜಯಪ್ರಕಾಶ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.