Advertisement

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

10:37 PM Nov 18, 2024 | Team Udayavani |

ನವದೆಹಲಿ: ಪಂಜಾಬ್‌ ಮಾಜಿ ಮುಖ್ಯಮಂತ್ರಿ ಬಿಯಾಂತ್‌ ಸಿಂಗ್‌ ಹಂತಕ ಬಲ್ವಂತ್‌ ಸಿಂಗ್‌ ರಾಜೋನಾ ಕ್ಷಮಾದಾನ ಅರ್ಜಿಯನ್ನು 2 ವಾರ ದೊಳಗೆ ಇತ್ಯರ್ಥಪಡಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್‌ ಸೂಚಿಸಿದೆ.

Advertisement

2012ರಲ್ಲೇ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಿದರೂ ಅದು ಇತ್ಯರ್ಥಗೊಂಡಿಲ್ಲ. ಹೀಗಾಗಿ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಬೇಕು ಎಂದು ಕೋರಿ ರಾಜೋನಾ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಕೇಂದ್ರ ಸರ್ಕಾರದ ಪರವಾಗಿ ಯಾರೂ ಹಾಜರಾಗದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿತು.

ಬಳಿಕ ಹಾಜರಾದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ನ್ಯಾಯಪೀಠಕ್ಕೆ ಕ್ಷಮೆಯಾಚಿಸಿದರು. ಬಳಿಕ ಸುಪ್ರೀಂಕೋರ್ಟ್‌ ವಿಚಾರಣೆಯನ್ನು ನ.25ಕ್ಕೆ ಮುಂದೂಡಿತು.

ಖಲಿಸ್ತಾನಿಗಳ ವಿರುದ್ಧ ದಿಟ್ಟ ಕ್ರಮ ಕೈಗೊಂಡಿದ್ದ ಬಿಯಾಂತ್‌ ಸಿಂಗ್‌ ವಿರುದ್ಧ ಪ್ರತಿಕಾರವಾಗಿ ಬಾಂಬ್‌ ದಾಳಿ ಮಾಡಲಾಗಿತ್ತು. ಇದರಲ್ಲಿ ಬಿಯಾಂತ್‌ ಸೇರಿ 16 ಮಂದಿ ಮೃತಪಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next