ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೌವಿಕ್ ಚಕ್ರವರ್ತಿ ಅವರಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ರಿಯಾ ಚಕ್ರವತ್ರಿಗೆ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್ ಔಟ್ ನೋಟಿಸ್ ಅನ್ನು ನ್ಯಾಯಾಲಯ ಶುಕ್ರವಾರ (ಅ. 25) ವಜಾಗೊಳಿಸಿದ್ದು ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮತ್ತು ಆಕೆಯ ಸಹೋದರ ಶೋವಿಕ್ ಹಾಗೂ ಆಕೆಯ ತಂದೆ ಇಂದ್ರಜಿತ್ ಚಕ್ರವರ್ತಿ ವಿರುದ್ಧ ಕೇಂದ್ರೀಯ ತನಿಖಾ ದಳ 2020ರಲ್ಲಿ ಲುಕ್ಔಟ್ ನೋಟಿಸ್ ಹೊರಡಿಸಿತ್ತು. ಸಿಬಿಐ ಹೊರಡಿಸಿದ್ದ ಲುಕ್ಔಟ್ ನೋಟಿಸ್ ಅನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸಿಪ್ರಕರಣ ಆಲಿಸಿದ ಸುಪ್ರೀಂ ಕೋರ್ಟ್ ಸಿಬಿಐ ಮನವಿಯನ್ನು ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಇದು “ಕ್ಷುಲ್ಲಕ” ಮತ್ತು ಆರೋಪಿಗಳಲ್ಲಿ ಒಬ್ಬರು “ಉನ್ನತ ವ್ಯಕ್ತಿ” ಎಂಬ ಕಾರಣಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದೆ.
2020 ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ಬಾಂದ್ರಾದಲ್ಲಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ನಟನ ಕುಟುಂಬಸ್ಥರು ದೂರು ನೀಡಿದ್ದರು.
ಇದನ್ನೂ ಓದಿ: One Day Cup: ಕೇವಲ 1 ರನ್ ಅಂತರದಲ್ಲಿ 8 ವಿಕೆಟ್ ಕಳೆದುಕೊಂಡ ವೆಸ್ಟರ್ನ್ ಆಸ್ಟ್ರೇಲಿಯಾ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಸಂಭವಿಸಿ ನಾಲ್ಕು ವರ್ಷಗಳು ಕಳೆದರೂ ಪ್ರಕರಣ ಇನ್ನೂ ಇತ್ಯರ್ಥಗೊಂಡಿಲ್ಲ.