Advertisement

ಶ್ರೀದೇವಿ ಸಾವಿನ ತನಿಖೆ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

02:06 PM May 11, 2018 | |

ಹೊಸದಿಲ್ಲಿ: ದುಬೈನಲ್ಲಿ ನಟಿ ಶ್ರೀದೇವಿ ಅವರ ಸಾವಿನ ಕುರಿತು ಸ್ವತಂತ್ರ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ವಜಾ ಗೊಳಿಸಿದೆ. 

Advertisement

ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ನ್ಯಾಯಮೂರ್ತಿ ಎ.ಎಂ.ಖಾನ್‌ವಿಲ್ಕರ್‌ ಮತ್ತು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿದ್ದ ತ್ರಿಸದಸ್ಯ ಪೀಠ ಸುನಿಲ್‌ ಸಿಂಗ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ. 

ಈ ಹಿಂದೆ ಸುನಿಲ್‌ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯೂ ವಜಾಗೊಂಡಿತ್ತು. 

ಫೆಬ್ರವರಿ 24 ರಂದು ದುಬೈನ ಹೊಟೇಲ್‌ವೊಂದರಲ್ಲಿ  ಶ್ರೀದೇವಿ ಅವರು ಬಾತ್‌ಟಬ್‌ನಲ್ಲಿ  ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next