ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ದಿ.ಕಲ್ಯಾಣ್ ಸಿಂಗ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿರುವುದಾಗಿ ಮಂಗಳವಾರ (ಆಗಸ್ಟ್ 30) ತಿಳಿಸಿದೆ.
ಇದನ್ನೂ ಓದಿ:ಶಿವಮೊಗ್ಗ : ಕೊಮ್ಮನಾಳು ಭಾಗದ ಜನರಲ್ಲಿ ಭೀತಿ ಹುಟ್ಟಿಸಿದ್ದ ಹೆಣ್ಣು ಚಿರತೆ ಕೊನೆಗೂ ಸೆರೆ
ಬಾಬ್ರಿ ಮಸೀದಿ ಪ್ರಕರಣದ ಕುರಿತಂತೆ 2019ರಲ್ಲಿ ಅಯೋಧ್ಯೆ ಕುರಿತ ಅಂತಿಮ ತೀರ್ಪು ಹೊರಬಿದ್ದ ಬಳಿಕ..ಈ ಪ್ರಕರಣ ಮುಕ್ತಾಯ ಕಂಡಿದೆ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ ಎಂದು ವರದಿ ಹೇಳಿದೆ.
ಅಂದಿನ ಉತ್ತರಪ್ರದೇಶ ಸರ್ಕಾರವು ಭದ್ರತೆಯ ಭರವಸೆ ನೀಡಿದ್ದ ಹೊರತಾಗಿಯೂ ರಥಯಾತ್ರೆಗೆ ಅವಕಾಶ ನೀಡಿದ್ದು, ಇದರ ಪರಿಣಾಮ ಬಾಬ್ರಿ ಮಸೀದಿ ಧ್ವಂಸಗೊಳ್ಳಲು ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆಗಿದ್ದ ಕಲ್ಯಾಣ್ ಸಿಂಗ್ ಮತ್ತು ಇತರರ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು ಎಂದು ವರದಿ ತಿಳಿಸಿದೆ.
ಆಯೋಧ್ಯೆ ಪ್ರಕರಣದ ಕುರಿತು 30ವರ್ಷಕ್ಕಿಂತಲೂ ಹೆಚ್ಚು ಕಾಲ ಸುಪ್ರೀಂನಲ್ಲಿ ವಿಚಾರಣೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶರಾಗಿದ್ದಾರೆ. ಅಂತಿಮ ತೀರ್ಪು ಕೂಡಾ ನೀಡಲಾಗಿದೆ. ಹೀಗಾಗಿ ಕಲ್ಯಾಣ್ ಸಿಂಗ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಮುಕ್ತಾಯಗೊಳಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.