Advertisement

ಗುಜರಾತ್ ಗಲಭೆ ಕೇಸ್: ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಮಧ್ಯಂತರ ಜಾಮೀನು

04:45 PM Sep 02, 2022 | Team Udayavani |

ನವದೆಹಲಿ: 2002 ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ “ಮುಗ್ಧರನ್ನು” ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದಲ್ಲಿ ಜೂನ್ 25 ರಂದು ಬಂಧನಕ್ಕೊಳಗಾದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

Advertisement

ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್, ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಸೆಟಲ್ವಾಡ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ನಿರ್ಧರಿಸುವವರೆಗೆ ವಿಚಾರಣಾ ನ್ಯಾಯಾಲಯಕ್ಕೆ ತನ್ನ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ಕೇಳಿದೆ.

ಗಲಭೆ ಪ್ರಕರಣಗಳಲ್ಲಿ ಜನರನ್ನು ಬಂಧಿಸಲು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ತನಿಖೆಯಲ್ಲಿ ತನಿಖಾ ಸಂಸ್ಥೆಯೊಂದಿಗೆ ಸಹಕರಿಸುವಂತೆಯೂ ಸುಪ್ರೀಂ ಕೋರ್ಟ್ ಸೆಟಲ್ವಾಡ್ ಅವರನ್ನು ಕೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next