Advertisement

370ನೇ ವಿಧಿ ರದ್ದು; ಸುಪ್ರೀಂನ ಪಂಚಸದಸ್ಯ ಪೀಠದಲ್ಲಿ 14 ಪಿಐಎಲ್ ಅಕ್ಟೋಬರ್ ನಲ್ಲಿ ವಿಚಾರಣೆ

11:16 AM Aug 29, 2019 | Nagendra Trasi |

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ಸಾಂವಿಧಾನಿಕ ಮಾನ್ಯತೆ ಬಗ್ಗೆ ಅಕ್ಟೋಬರ್ ನಲ್ಲಿ ಪರಿಶೀಲನೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಸಲು ಐವರು ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠಕ್ಕೆ ಶಿಫಾರಸು ಮಾಡಿದೆ.

Advertisement

ಕೇಂದ್ರ ಸರಕಾರ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 14 ಪಿಐಎಲ್ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದ್ದು, ಈ ಬಗ್ಗೆ ಉತ್ತರ ನೀಡುವಂತೆ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿಯನ್ನು ರದ್ದುಪಡಿಸಲು ರಾಷ್ಟ್ರಪತಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ 7ದಿನದೊಳಗೆ ಉತ್ತರ ನೀಡುವಂತೆ ನೋಟಿಸ್ ನೀಡಿದೆ.

370ನೇ ವಿಧಿ ರದ್ದುಪಡಿಸಿರುವ ಕೇಂದ್ರದ ನಿರ್ಧಾರದ ಬಗ್ಗೆ ಪಂಚಸದಸ್ಯ ಸಾಂವಿಧಾನಿಕ ಪೀಠ ಅಕ್ಟೋಬರ್ ಮೊದಲ ವಾರದಲ್ಲಿ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಜಮ್ಮು-ಕಾಶ್ಮೀರಕ್ಕೆ ತೆರಳಲು ಅನುಮತಿ ಕೊಡಿ: ವಿದ್ಯಾರ್ಥಿ ಗೆ ಗ್ರೀನ್ ಸಿಗ್ನಲ್

Advertisement

370ನೇ ವಿಧಿಯನ್ನು ರದ್ದುಪಡಿಸಿರುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ 14 ಪಿಐಎಲ್ ಜತೆಗೆ ಬುಧವಾರ ಕಾನೂನು ವಿದ್ಯಾರ್ಥಿ ಜಾಮಿಯಾ ಮಿಲ್ಲಿಯಾ ತನಗೆ ಕಾಶ್ಮೀರದ ಅನಂತ್ ನಾಗ್ ಗೆ ತೆರಳಲು ಅನುಮತಿ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜಾಮಿಯಾಗೆ ಪೋಷಕರ ಬಳಿ ತೆರಳಲು ಅನುಮತಿ ನೀಡಿದ ಸುಪ್ರೀಂಕೋರ್ಟ್, ವಿದ್ಯಾರ್ಥಿಗೆ ಸೂಕ್ತ ಭದ್ರತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಅಲ್ಲದೇ ವಿದ್ಯಾರ್ಥಿ ದಿಲ್ಲಿಗೆ ವಾಪಸ್ ಆದ ಬಳಿಕ ಈ ಬಗ್ಗೆ ಕೋರ್ಟ್ ಗೆ ವರದಿ ಒಪ್ಪಿಸುವಂತೆ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next