ಹೊಸದಿಲ್ಲಿ: ಮಿದುಳು ಜ್ವರದಿಂದ 150ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ, ಬಿಹಾರ ಮತ್ತು ಉತ್ತರಪ್ರದೇಶ ಸರ್ಕಾರಗಳಿಗೆ ನೊಟೀಸ್ ನೀಡಿದೆ.
ಮಕ್ಕಳ ಸಾವಿನ ಕುರಿತಾಗಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಪಿಐಎಲ್‌ಗೆ 7 ದಿನಗಳ ಒಳಗೆ ಸರ್ಕಾರಗಳು ಉತ್ತರ ನೀಡಬೇಕು ಎಂದು ಸುಪ್ರೀಂ ಹೇಳಿದೆ.
ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾದ ಪಿಐಎಲ್‌ನಲ್ಲಿ ಬಿಹಾರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಲಾಗಿದೆ. ಕೇಂದ್ರ ಸರ್ಕಾರ ವೈದ್ಯಕೀಯ ಸೇವೆಗೆ ತಜ್ಞರನ್ನು ಮುಜಾಫರ್‌ಪುರಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಲಾಗಿದೆ. 100 ಮೊಬೈಲ್ ಐಸಿಯು ಯುನಿಟ್‌ಗಳನ್ನು ಚಿಕಿತ್ಸೆಗಾಗಿ ಸಿದ್ಧಪಡಿಸಬೇಕು ಎಂದು ಮನವಿ ಮಾಡಲಾಗಿದೆ.
ಮೂರು ಸರ್ಕಾರಗಳು ರೋಗದ ಕುರಿತಾಗಿ ಜಾಗೃತಿ ಮೂಡಿಸಬೇಕು, ಮೃತ ಮಕ್ಕಳ ಕುಟುಂಬ ಸದಸ್ಯರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು ಎಂದು ಮನವಿ ಮಾಡಲಾಗಿದೆ.
ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಜಸ್ಟಿಸ್ ಬಿ.ಆರ್.ಗವಾಯ್ ಅವರ ಪೀಠ ಸರ್ಕಾರಗಳಿಗೆ ಇಂದಿನಿಂದ 10 ದಿನಗಳ ಒಳಗೆ ಉತ್ತರಿಸಲು ಸೂಚನೆ ನೀಡಿದೆ.