Advertisement

ಸುಪ್ರೀಂಕೋರ್ಟ್‌ನಿಂದ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ನಿವೃತ್ತಿ

06:35 PM Sep 23, 2022 | Team Udayavani |

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ಸದ್ಯ 5ನೇ ಹಿರಿಯ ನ್ಯಾಯಮೂರ್ತಿಯಾಗಿರುವ ಇಂದಿರಾ ಬ್ಯಾನರ್ಜಿ ಶುಕ್ರವಾರ ನಿವೃತ್ತರಾಗಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಅವರಿಗೆ ವಿದಾಯ ಕೋರುವ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ನ್ಯಾಯಮೂರ್ತಿಗಳ ನೇಮಕ ಆಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯ ಸುಪ್ರೀಂಕೋರ್ಟ್‌ನಲ್ಲಿ ನ್ಯಾ.ಹಿಮಾ ಕೋಹ್ಲಿ, ನ್ಯಾ.ಬಿ.ವಿ.ನಾಗರತ್ನ, ನ್ಯಾ.ಬೇಲಾ ಎಂ.ತ್ರಿವೇದಿ ಮಹಿಳಾ ನ್ಯಾಯಮೂರ್ತಿಗಳಾಗಿದ್ದಾರೆ.

2018ರ ಆ.7ರಂದು ನ್ಯಾ.ಇಂದಿರಾ ಬ್ಯಾನರ್ಜಿ ಸುಪ್ರೀಂಕೋರ್ಟ್‌ಗೆ ಪದೋನ್ನತಿ ಪಡೆದಿದ್ದರು. 1950 ಜ.26ರಲ್ಲಿ ಸುಪ್ರೀಂಕೋರ್ಟ್‌ ಅಸ್ತಿತ್ವಕ್ಕೆ ಬಂದ ಬಳಿಕ ಕೇವಲ 11 ಮಹಿಳಾ ನ್ಯಾಯಮೂರ್ತಿಗಳನ್ನು ಕಂಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next