Advertisement
ಮಡಿಕೇರಿಯಲ್ಲಿ ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಾಕಷ್ಟು ವಿವಾದ, ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಅಲ್ಲದೇ ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸಿ, ಕೆಜೆ ಜಾರ್ಜ್, ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಹಾಗೂ ಎಎಂ ಪ್ರಸಾದ್ ಗೆ ಕ್ಲೀನ್ ಚಿಟ್ ನೀಡಿತ್ತು.
Related Articles
Advertisement
ನ್ಯಾ.ಗೋಯೆಲ್ ಹಾಗೂ ನ್ಯಾ.ಉದಯ್ ಲಲಿತ್ ಅವರಿದ್ದ ಪೀಠ ವಿಚಾರಣೆ ನಡೆಸಿ, ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕೆಂದು ಆದೇಶ ನೀಡಿದ್ದಾರೆ. ಅಲ್ಲದೇ 3 ತಿಂಗಳಲ್ಲಿ ತನಿಖೆಯ ವರದಿ ನೀಡುವಂತೆ ಸೂಚನೆ ನೀಡಿದೆ ಎಂದು ಕುಶಾಲಪ್ಪ ಪರ ವಕೀಲರಾದ ಯತೀಂದ್ರ ಚೌಧರಿ ತಿಳಿಸಿದ್ದಾರೆ.
ರಾಜೀನಾಮೆ ಕೊಡೋ ಅವಶ್ಯಕತೆ ಇಲ್ಲ: ಕೆಜೆ ಜಾರ್ಜ್
ಎಂಕೆ ಗಣಪತಿ ಆತ್ಯಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ವೇಳೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿದ್ದೆ. ಹಾಗೆಯೇ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರ ಮೇಲು ಕೇಸುಗಳಿವೆ. ಅವರಾರು ರಾಜೀನಾಮೆ ಕೊಟ್ಟಿಲ್ಲ. ನಾನು ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ. ಆದ್ರೆ ಈಗ ಮತ್ತೆ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.