Advertisement

ಸಾಮಾಜಿಕ ಜಾಲತಾಣ ಖಾತೆಗೆ ಆಧಾರ್ ಲಿಂಕ್-ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್

09:38 AM Oct 15, 2019 | Team Udayavani |

ನವದೆಹಲಿ: ಆಧಾರ್‌ ಸಂಖ್ಯೆಯನ್ನು ಎಲ್ಲಾ ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಲಿಂಕ್‌ ಮಾಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ  ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

Advertisement

ಎಲ್ಲಾ ವಿಚಾರಗಳಿಗೂ ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾದ ಅಗತ್ಯವಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಖಾತೆಗಳ ಕುರಿತು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ವೇಳೆ ಅಭಿಪ್ರಾಯವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಈ ವಿಚಾರ ಈಗಾಗಲೇ ಮದ್ರಾಸ್ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿತ್ತು. ನೀವು ಬೇಕಿದ್ದರೆ ಮದ್ರಾಸ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಬಹುದು ಎಂದು ಸೂಚಿಸಿದೆ.

ಈ ಅರ್ಜಿಯನ್ನು ವಕೀಲರಾದ ಅಶ್ವಿ‌ನಿ ಉಪಾಧ್ಯಾಯ ಅವರು ದಾಖಲಿಸಿದ್ದು, ಆಧಾರ್‌ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಲಿಂಕ್‌ ಮಾಡಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಸೋಮವಾರ ಪಿಐಎಲ್ ನ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌  ಅರ್ಜಿಯನ್ನು ವಜಾಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next