Advertisement

INX ಮೀಡಿಯಾ ಪ್ರಕರಣ: ಚಿದಂಬರಂ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

09:32 AM Nov 29, 2019 | Nagendra Trasi |

ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಗುರುವಾರ ತೀರ್ಪನ್ನು ಕಾಯ್ದಿರಿಸಿದೆ.

Advertisement

ಜಾರಿ ನಿರ್ದೇಶನಾಲಯ ನೀಡಿರುವ ಮೂರು ಮುಚ್ಚಿದ ಲಕೋಟೆಯನ್ನು ಸ್ವೀಕರಿಸುವಂತೆ ಸುಪ್ರೀಂಕೋರ್ಟ್ ರಿಜಿಸ್ಟ್ರಿಗೆ ನಿರ್ದೇಶನ ನೀಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಚಿದಂಬರಂಗೆ ಜಾಮೀನು ನೀಡದಂತೆ ಜಾರಿ ನಿರ್ದೇಶನಾಲಯ ಪರ ವಕೀಲರು ವಾದ ಮಂಡಿಸಿದ್ದರು. ಕಸ್ಟಡಿಯಲ್ಲಿದ್ದಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರುವಷ್ಟು ಪ್ರಬಲರಾಗಿದ್ದಾರೆಂದು ಇ.ಡಿ. ವಾದಿಸಿತ್ತು.

ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಚಿದಂಬರಂ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಲ್ಲದೇ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ಹೈಕೋರ್ಟ್ ಇನ್ನೂ ಎರಡು ವಾರಗಳ ಕಾಲ ವಿಸ್ತರಿಸಿ ಆದೇಶ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next