Advertisement

ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣ ಸಂವಿಧಾನ ಪೀಠಕ್ಕೆ?

03:45 AM Feb 21, 2017 | |

ನವದೆಹಲಿ: ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಪ್ರಕರಣವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ. 

Advertisement

ತ್ರಿಸದಸ್ಯ ಪೀಠದ ನೇತೃತ್ವ ವಹಿಸಿದ್ದ ನ್ಯಾ. ದೀಪಕ್‌ ಮಿಶ್ರಾ, ಪ್ರಕರಣ ಬಹಳ ಸೂಕ್ಷ್ಮವಾಗಿದ್ದು, ಐವರು ನ್ಯಾಯಾಧೀಶರು ಇರುವ ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೇ ಬೇಡವೇ ಎಂದು ಪರಿಶೀಲಿಸುವ ಅಗತ್ಯವಿದೆ. ಕಾನೂನಿನ ಚೌಕಟ್ಟಿನಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಪ್ರವೇಶ ಪರ ಮತ್ತು ವಿರೋಧವಾಗಿ ಸುಪ್ರೀಂ ಪೀಠದ ಮುಂದೆ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದವು. 2007ರಲ್ಲಿ ಎಲ್‌ಡಿಎಫ್ ನೇತೃತ್ವದ ಸರ್ಕಾರ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಲು ಆಸಕ್ತಿ ವಹಿಸಿತ್ತಾದರೂ, ನಂತರ ಯುಡಿಎಫ್ ಸರ್ಕಾರ ಅದಕ್ಕೆ ಅವಕಾಶ ನೀಡಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next