Advertisement
ಪಶ್ಚಿಮ ಬಂಗಾಲದ ಗ್ರಾಮ ಪಂಚಾಯತಿ, ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಸಮಿತಿಯ ಒಟ್ಟು 58,692 ಸ್ಥಾನಗಳ ಪೈಕಿ 20,159 ಸ್ಥಾನಗಳನ್ನು ಟಿಎಂಸಿ ಅವಿರೋಧವಾಗಿ ಜಯಿಸಿತ್ತು. ಈ ವರ್ಷ ಮೇ ತಿಂಗಳಲ್ಲಿ ನಡೆದಿದ್ದ ರಾಜ್ಯದ ಸ್ಥಳೀಯಾಡಳಿತೆ ಚುನಾವಣೆಯಲ್ಲಿ ವ್ಯಾಪಕ ಹಿಂಸೆ ಉಂಟಾಗಿತ್ತು.
Related Articles
Advertisement
ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಜಸ್ಟಿಸ್‌ಗಳಾದ ಎ ಎಂ ಖಾನ್‌ವಿಲ್ಕರ್ ಮತ್ತು ಡಿ ವೈ ಚಂದ್ರಚೂಡ್ ಅವರನ್ನು ಒಳಗೊಂಡ ಪೀಠವು, ಪಶ್ಚಿಮ ಬಂಗಾಲದ ಸ್ಥಳೀಯಾಡಳಿತೆಯ ಚುನಾವಣೆಯಲ್ಲಿ 20,000ಕ್ಕೂ ಅಧಿಕ ಸೀಟುಗಳಲ್ಲಿ ಒಂದು ಪಕ್ಷದ ಅಭ್ಯರ್ಥಿಗಳು ಮಾತ್ರವೇ ನಾಮಪತ್ರ ಸಲ್ಲಿಸಿರುವುದು ಮತ್ತು ಇತರ ಪಕ್ಷದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿ, ಈ ರೀತಿಯ ಸ್ಥಿತಿ ಭವಿಷ್ಯದಲ್ಲಿ ಉಂಟಾಗದಂತೆ ನೋಡಿಕೊಳ್ಳಬೇಕಾದ ಮತ್ತು ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದನ್ನು ನಿರ್ಧರಿಸಬೇಕಾದ ಅಗತ್ಯವಿದೆ ಎಂದು ಹೇಳಿತು.