ನವದೆಹಲಿ: ಅಪರಾಧ ಪ್ರಕರಣಗಳಲ್ಲಿ ಆರೋಪ ಹೊತ್ತ ಶಾಸಕರು ಅಥವಾ ಸಂಸದರನ್ನು ಆರೋಪ ಸಾಬೀತಾಗುವ ಮೊದಲೇ ಅವರನ್ನು ಆ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್, ಮಂಗಳವಾರ ಮಹತ್ವದ ತೀರ್ಪು ನೀಡಿದೆ.
ಆರೋಪ ಹೊತ್ತ ರಾಜಕಾರಣಿಗಳು ಶಾಸಕರಾಗಿ, ಸಂಸದರಾಗಿ ಮುಂದುವರಿಯಲು ಅವಕಾಶ ಕೊಡಬಾರದೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿ ಕೋರ್ಟ್ ಈ ತೀರ್ಪು ನೀಡಿದೆ.
ಮುಖ್ಯನ್ಯಾಯ ಮೂರ್ತಿ ದೀಪಕ್ ಮಿಶ್ರಾ ಅವರ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಕ್ರಿಮಿನಲ್ ಆರೋಪ ಹೊಂದಿದಾಕ್ಷಣ ಸ್ಪರ್ಧಿಸಲು ನಿರ್ಬಂಧ ಹೇರಲು ಸಾಧ್ಯವಿಲ್ಲ . ಆರೋಪ ಸಾಬೀತಾದರೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತೀರ್ಪು ನೀಡಲಾಗಿದೆ. ಈ ಕುರಿತು ಕಾನೂನು ರಚಿಸಲು ಕೇಂದ್ರ ಸರ್ಕಾರ ಮತ್ತು ಸಂಸತ್‌ಗೆ ಕೋರ್ಟ್ ಸೂಚನೆ ನೀಡಿದೆ.
ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಹಿನ್ನಲೆಯ ಕುರಿತು ಚುನಾವಣ ಆಯೋಗ ಮತ್ತು ಮತದಾರರಿಗೆ ಸಾಮಾಜಿಕ ತಾಣಗಳ ಮೂಲಕ ಮಾಹಿತಿ ನೀಡಬೇಕು ಎಂದು ಕೋರ್ಟ್ ಹೇಳಿದೆ.