ನವದೆಹಲಿ: ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 6ರಿಂದ 12ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವಂತೆ ನಿರ್ದೇಶನ ನೀಡಬೇಕು ಎಂಬ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸೋಮವಾರ ಸರ್ಕಾರಗಳ ಪ್ರತಿಕ್ರಿಯೆ ಕೇಳಿದೆ.
Advertisement
ಮಧ್ಯಪ್ರದೇಶ ಮೂಲದ ವೈದ್ಯೆ, ಸಾಮಾಜಿಕ ಹೋರಾಟಗಾರ್ತಿ ಜಯಾ ಠಾಕೂರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಈ ಕುರಿತು ಪ್ರತಿಕ್ರಿಯಿಸುವಂತೆ ಸೂಚಿಸಿ ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.