Advertisement

ಸಾಮಾಜಿಕ ಜಾಲತಾಣ ದುರ್ಬಳಕೆ ತಡೆಗೆ ಮಾರ್ಗದರ್ಶಿ ಸೂತ್ರ ರೂಪಿಸಿ; ಕೇಂದ್ರಕ್ಕೆ 3 ವಾರ ಗಡುವು

10:05 AM Sep 25, 2019 | Team Udayavani |

ನವದೆಹಲಿ: ಸಾಮಾಜಿಕ ಜಾಲತಾಣದ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ, ಅದರ ಬಳಕೆಗೆ ಸಂಬಂಧಿಸಿದಂತೆ ಮಾರ್ಗದರ್ಶಿ ಸೂತ್ರ ರಚಿಸುವ ಬಗ್ಗೆ ಸುಪ್ರೀಂಕೋರ್ಟ್ ಮಂಗಳವಾರ ಕೇಂದ್ರ ಸರಕಾರ ಅಫಿಡವಿತ್ ಸಲ್ಲಿಸಲು ಮೂರು ವಾರಗಳ ಗಡುವು ನೀಡಿದೆ.

Advertisement

ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ತುಂಬಾ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಸುಪ್ರೀಂಕೋರ್ಟ್ ಆಧಾರ್ ಜತೆಗೆ ಸಾಮಾಜಿಕ ಜಾಲತಾಣಗಳ ಖಾತೆಯನ್ನು ಲಿಂಕ್ ಮಾಡಬೇಕು ಎಂಬುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕಳವಳ ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಸಾರ್ವಭೌಮತ್ವ ಮತ್ತು ವೈಯಕ್ತಿಕ ಗೌರವ ಕೂಡಾ ಅಡಕವಾಗಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆಯ ಖಾಸಗಿತನವನ್ನು ಹೊಂದಾಣಿಕೆ ಮಾಡಿಕೊಂಡು ಅದನ್ನು ಬಳಸುವ ಬಗ್ಗೆ ಮಾರ್ಗದರ್ಶಿ ಸೂತ್ರ ರಚಿಸಿ ಅಫಿಡವಿತ್ ಸಲ್ಲಿಸಬೇಕೆಂದು ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ.

ಅಪರಾಧ ತಡೆಗಟ್ಟುವಿಕೆ, ಖಾಸಗಿತನದ ವಿಷಯಗಳನ್ನು ಹೊಂದಿರುವುದರಿಂದ ಈ ಬಗ್ಗೆ ಕೇಂದ್ರ ಸರಕಾರವೇ ನಿರ್ಧಾರ ತೆಗೆದುಕೊಳ್ಳಬೇಕು ವಿನಃ, ಕೋರ್ಟ್ ಅಲ್ಲ ಎಂದು ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ದೀಪಕ್ ಗುಪ್ತಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next