ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳನ್ನು ವಂಚಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಇದು ಸ್ವತಃ ಕೇಂದ್ರ ಸಚಿವ ಹಾಗೂ ರಾಜ್ಯದ ಸಂಸದ ನಾರಾಯಣಸ್ವಾಮಿ ನೀಡಿದ ಲಿಖಿತ ಉತ್ತರದಿಂದ ಸಾಬೀತಾಗಿದೆ. ಈ ವಂಚನೆ ಖಂಡಿಸುವ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂದರು.
ಇದುವರೆಗೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಕೂಡ ಹೋಗಿಲ್ಲ. ಅಷ್ಟೇ ಅಲ್ಲ ಒಟ್ಟಾರೆ ಮೀಸಲಾತಿ ಪ್ರಮಾಣ ಶೇ. 50ರಿಂದ ಶೇ. 56ಕ್ಕೆ ಹೆಚ್ಚಿಸುವ ಬಗ್ಗೆಯೂ ಪ್ರಸ್ತಾವನೆಯು ರಾಜ್ಯ ಸರ್ಕಾರದಿಂದ ಸಲ್ಲಿಕೆ ಆಗಿಲ್ಲ ಎಂದು ಹೇಳಿದೆ. ಇದು ಆ ಸಮುದಾಯಗಳಿಗೆ ಮಾಡಿದ ದೊಡ್ಡ ಮೋಸ ಎಂದು ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!
ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಿರುವುದಾಗಿ ಹೇಳಿದೆ. ಈ ಸಂಬಂಧ ಸರ್ಕಾರ ಸಿದ್ಧಪಡಿಸಿರುವ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಸುಗ್ರೀವಾಜ್ಞೆ– 2022’ ಹೊರಡಿಸಿರುವುದಾಗಿ ರಾಜ್ಯ ಸರ್ಕಾರ ಹೇಳಿತ್ತು ಎಂದರು.