Advertisement

ಎಸ್ ಸಿ- ಎಸ್ ಟಿ ಮೀಸಲಾತಿ: ಸಿಎಂ ಗೆ ಅಭಿನಂದನೆ ಸಲ್ಲಿಸಿದ ಕರಾವಳಿ ತಂಡ

12:31 PM Oct 17, 2022 | Team Udayavani |

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಬೇಡಿಕೆಗೆ ರಾಜ್ಯ ಸರ್ಕಾರವು ಸ್ಪಂದಿಸಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲಾತಿಯನ್ನು ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಇದ್ದ ಶೇ.3 ಮೀಸಲಾತಿಯನ್ನು ಶೇ. 7 ಕ್ಕೆ ಹೆಚ್ಚಿಸಿದ್ದಕ್ಕಾಗಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ಒಂದು ಸಾವಿರಕ್ಕೂ ಅಧಿಕ ಪರಿಶಿಷ್ಟ ಪಂಗಡದ ಜನರು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿಎಂ‌ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು.

Advertisement

ಮೀಸಲಾತಿ ಹೆಚ್ಚಳ ಮಾಡುವಂತೆ ಹಾಗೂ ಜನಾಂಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇರೆ ಬೇರೆ ಸರಕಾರಗಳು ಅಸ್ತಿತ್ವದಲ್ಲಿದ್ದ ಸಂಧರ್ಭದಲ್ಲಿಯೂ ಕೂಡ ಇಂದಿನ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರ ನೇತೃತ್ವದಲ್ಲಿ ಸಂಭದಪಟ್ಟ ಇಲಾಖಾ ಸಚಿವರಲ್ಲಿ ಹಾಗೂ ಆಯಾ ಸಂದರ್ಭಗಳಲ್ಲಿ  ಮುಖ್ಯಮಂತ್ರಿಗಳಲ್ಲಿ ಮನವಿಯನ್ನು ಮಾಡಲಾಗಿತ್ತು. ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಪರಿಶಿಷ್ಟ ಹಾಗೂ ಪರಿಶಿಷ್ಟ ಪಂಗಡದ ಜನರ ಬೇಡಿಕೆಯನ್ನು ಈಡೇರಿಸಿರುವುದು ರಾಜ್ಯದ ಇಡೀ ದಲಿತ ಸಮುದಾಯಕ್ಕೆ ಖುಷಿಯನ್ನು ಉಂಟುಮಾಡಿದೆ.

ಮುಖ್ಯಮಂತ್ರಿಗಳನ್ನು ಅಭಿನಂದಿಸುವ ಸಂಧರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್ ರವರೊಂದಿಗೆ, ಉಡುಪಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಲೆಕುಡಿಯ ಸಂಘದ ರಾಜ್ಯಧ್ಯಕ್ಷ ಶ್ರೀಧರ್ ಗೌಡ ಈದು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next