Advertisement

Lottery king… ಅಕ್ರಮ ಹಣ ವರ್ಗ: ಲಾಟರಿ ದೊರೆ ವಿರುದ್ಧ ವಿಚಾರಣೆಗೆ ತಡೆಯಾಜ್ಞೆ

11:16 PM Apr 10, 2024 | Team Udayavani |

ಹೊಸದಿಲ್ಲಿ: ಅತಿ ಹೆಚ್ಚು ಮೊತ್ತದ ಚುನಾವಣೆ ಬಾಂಡ್‌ಗಳನ್ನು ಖರೀದಿಸಿರುವ ಲಾಟರಿ ಕಿಂಗ್‌ ಸ್ಯಾಂಟಿಯಾಗೋ ಮಾರ್ಟಿನ್‌ ವಿರುದ್ಧ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಇ.ಡಿ. ನಡೆಸುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

Advertisement

ಲಾಟರಿ ಹಗರಣ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ನಡೆಸುತ್ತಿದೆ. ಅದು ಪೂರ್ಣಗೊಳ್ಳುವ ವರೆಗೂ ಇ.ಡಿ.ವಿಚಾರಣೆಗೆ ತಡೆ ನೀಡಬೇಕೆಂದು ಕೋರಿ ಮಾರ್ಟಿನ್‌ ಕೇರಳದ ಎರ್ನಾಕುಳಂನ ಪಿಎಂ ಎಲ್‌ಎ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಮಾರ್ಟಿನ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next