ನವದೆಹಲಿ: ಪತಂಜಲಿ ಉತ್ಪನ್ನಗಳನ್ನು ಉಪಯೋಗಿಸುವುದರಿಂದ ಆರೋಗ್ಯ ಲಾಭಗಳಿವೆ ಎಂಬ ಜಾಹೀರಾತಿನ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ (ಮಾರ್ಚ್ 19) ಖ್ಯಾತ ಯೋಗ ಪಟು ಬಾಬಾ ರಾಮ್ ದೇವ್ ಮತ್ತು ಪತಂಜಲಿ ಆಯುರ್ವೇದದ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಇದನ್ನೂ ಓದಿ:Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ
ಈಗಾಗಲೇ ನ್ಯಾಯಾಲಯ ನೀಡಿರುವ ನೋಟಿಸ್ ಗೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸದಿರುವುದಕ್ಕೆ ಜಸ್ಟೀಸ್ ಹಿಮಾ ಕೊಹ್ಲಿ ಮತ್ತು ಜಸ್ಟೀಸ್ ಅಸಾದುದ್ದೀನ್ ಅಮಾನುಲ್ಲಾ ಪೀಠ ಪತಂಜಲಿ ಕಂಪನಿ ಮತ್ತು ಬಾಲಕೃಷ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ನ್ಯಾಯಾಲಯಕ್ಕೆ ಸಮರ್ಪಕ ಉತ್ತರ ನೀಡುವುದರಿಂದ ನುಣುಚಿಕೊಂಡು ಕಾನೂನು ಉಲ್ಲಂಘಿಸಿರುವ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಸಮನ್ಸ್ ನಲ್ಲಿ ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ಬಾಬಾ ರಾಮ್ ದೇವ್ ಅವರು ವ್ಯಾಕ್ಸಿನೇಷನ್ ಮತ್ತು ಅಲೋಪತಿ ಔಷಧವನ್ನು ಅಪಖ್ಯಾತಿಗೊಳಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ ದೂರಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.