ಹೊಸದಿಲ್ಲಿ: ಆರ್ಥಿಕವಾಗಿ ಮೇಲ್ವರ್ಗದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲು ನೀಡುವ ಕೇಂದ್ರ ಸರಕಾರದ ನಿರ್ಧಾರ ವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಸೋಮ ವಾರ ತೀರ್ಪು ನೀಡಲಿದೆ.
Advertisement
ಮುಖ್ಯ ನ್ಯಾಯ ಮೂರ್ತಿ ಯು.ಯು. ಲಲಿತ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಲಿದೆ. ಅದೇ ದಿನ ಹಾಲಿ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತಿಯಾಗಲಿದ್ದಾರೆ.
ನ.9ರಂದು ಹಿರಿಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನೂತನ ಮುಖ್ಯ ನ್ಯಾಯ ಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.