Advertisement

ತಮಿಳುನಾಡಿಗೆ ಕಾವೇರಿ ನೀರು ಬಿಡಿ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

04:47 PM Mar 21, 2017 | Team Udayavani |

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮುಂದುವರಿಸುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಕರ್ನಾಟಕಕ್ಕೆ ಸರ್ಕಾರಕ್ಕೆ ಸೂಚನೆ ನೀಡಿದೆ.

Advertisement

ಜುಲೈ 11ರಿಂದ ಎಲ್ಲಾ ಮೇಲ್ಮನವಿಗಳ ಅಂತಿಮ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಪೀಠ ತಿಳಿಸಿದ್ದು, ಅಲ್ಲಿಯವರೆಗೆ ತಮಿಳುನಾಡಿಗೆ ದಿನಂಪ್ರತಿ 2 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮುಂದುವರಿಯಲಿದೆ ಎಂದು ನ್ಯಾ.ದೀಪಕ್ ಮಿಶ್ರ ನೇತೃತ್ವದ ತ್ರಿಸದಸ್ಯ ಪೀಠ ತಿಳಿಸಿದೆ.

ಕಾವೇರಿ ವಿವಾದದ ಮೇಲ್ಮನವಿಗಳ ಅರ್ಜಿಯ ವಿಚಾರಣೆಯನ್ನು 15 ದಿನಗಳ ಕಾಲ ನಡೆಸುವುದಾಗಿ ಹೇಳಿದೆ. ಏತನ್ಮಧ್ಯೆ ಕರ್ನಾಟಕ ನೀರು ಬಿಡುವ ಕುರಿತು ಸುಪ್ರೀಂಕೋರ್ಟ್ ಆದೇಶ ಪಾಲಿಸುತ್ತಿಲ್ಲ ಎಂದು ತಮಿಳುನಾಡು ಪರ ವಕೀಲ ಶೇಖರ್ ನಫ್ಡೆ ವಾದಿಸಿದರು.

ಕರ್ನಾಟಕದಲ್ಲಿ ಕುಡಿಯಲು ನೀರಿಲ್ಲ, ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ ಎಂದು ಕರ್ನಾಟಕದ ಪರ ಹಿರಿಯ ವಕೀಲರಾದ ಫಾಲಿ ಎಸ್ ನಾರಿಮನ್ ಪ್ರತಿವಾದಿಸಿದರು. ಆದರೆ ನಾರಿಮನ್ ಅವರ ವಾದಕ್ಕೆ ತಮಿಳುನಾಡು ವಕೀಲ ಆಕ್ಷೇಪ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next