Advertisement

ಪುರಿ ಜಗನ್ನಾಥ ರಥಯಾತ್ರೆಗೆ ಅನುಮತಿಗಾಗಿ ಸುಪ್ರೀಂ ಗೆ ಅರ್ಜಿ: ಇಂದು ವಿಚಾರಣೆ

01:12 PM Jun 22, 2020 | keerthan |

ಹೊಸದಿಲ್ಲಿ: ಕೋವಿಡ್-19 ಸೋಂಕಿನ ಕಾರಣದಿಂದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯನ್ನು ಈ ಬಾರಿ ನಡೆಸಬಾರದು ಎಂದು ನೀಡಿದ್ದ ತೀರ್ಪನ್ನು ಹಿಂಪಡೆಯುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ. ಈ ಅರ್ಜಿಗಳ ವಿಚಾರಣೆಯನ್ನು ಇಂದು ಸರ್ವೋಚ್ಛ ನ್ಯಾಯಾಲಯ ಇಂದು ಕೈಗೆತ್ತಿಕೊಳ್ಳಲಿದೆ.

Advertisement

ಒಡಿಶಾ ರಾಜ್ಯದ ಈ ಐತಿಹಾಸಿಕ ಪುರಿ ರಥಯಾತ್ರೆ ಜೂನ್ 23ರಂದು ನಡೆಯಬೇಕಿತ್ತು. ಆದರೆ ಕೋವಿಡ್-19 ಸೋಂಕು ಭೀತಿ ಹಿನ್ನಲೆಯಲ್ಲಿ ಈ ಬಾರಿ ರಥಯಾತ್ರೆ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಜೂನ್ 18ರಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ, ತೀರ್ಪನ್ನು ಪುನರ್ ಪರಿಶೀಲಿಸುವಂತೆ ಹಲವರು ಅರ್ಜಿ ಸಲ್ಲಸಿದ್ದರು.

ತೀರ್ಪು ಮರುಪರಿಶೀಲಿಸುವಂತೆ ಜೂನ್ 19ರಂದು ಜಗನ್ನಾಥ್ ಸಂಸ್ಕೃತಿ ಜನ ಜಾಗರಣ ಮಂಚ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ನ್ಯಾ. ಎಸ್ ರವೀಂದ್ರ ಭಟ್ ಅವರ ಏಕಸದಸ್ಯ ಪೀಠ ಇಂದು ಈ ಅರ್ಜಿಗಳ ವಿಚಾರಣೆ ನಡೆಸಲಿದೆ.

ಕೋವಿಡ್ 19 ಸೋಂಕು ಹರಡುವ ಭೀತಿ ಇರುವ ಕಾರಣ ರಥಯಾತ್ರೆ ನಡೆಸಲು ಅನುಮತಿ ನೀಡಬಾರದು ಎಂದು ಒಡಿಶಾ ವಿಕಾಸ್ ಪರಿಷದ್ ಎಂಬ ಎನ್ ಜಿಒ ಒಂದು ಪಿಐಎಲ್ ಸಲ್ಲಿಸಿತ್ತು. ಈ ಅರ್ಜಿಯನ್ನು ಮಾನ್ಯ ಮಾಡಿದ್ದ ಕೋರ್ಟ್ ತಡೆಯಾಜ್ಞೆ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next