Advertisement

ರಾಮ ಸೇತು ರಾಷ್ಟ್ರೀಯ ಸ್ಮಾರಕ: ವಿಚಾರಣೆಗೆ ಸುಪ್ರೀಂ ಸಮ್ಮತಿ

07:39 PM Feb 16, 2023 | Team Udayavani |

ನವದೆಹಲಿ: ರಾಮ ಸೇತು ಅನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ರಾಜ್ಯಸಭೆ ಮಾಜಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿರುವ ಪಿಐಎಲ್‌ ಅನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್‌ ಗುರುವಾರ ಸಮ್ಮತಿಸಿದೆ.

Advertisement

ಸಿಜೆಐ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ. ಪಿ.ಎಸ್‌.ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠವು, ರಾಮಸೇತು ಕುರಿತಂತೆ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ, ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲಾಗುವುದು ಎಂದು ಹೇಳಿತು.

ಸಾಂವಿಧಾನಿಕ ಪೀಠದ ಮುಂದಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಂಡ ಬಳಿಕ ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಇದೇ ವೇಳೆ ನ್ಯಾಯಪೀಠ ಹೇಳಿತು.

ರಾಮ ಸೇತು ಅನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಕುರಿತಂತೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಜ.19ರಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next