Advertisement
ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಹಾಗೂ ಅನರ್ಹತೆ ಕುರಿತು ನಾಳೆ ಬೆಳಗ್ಗೆವರೆಗೂ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಸುಪ್ರೀಂ ಪೀಠ ಈ ಸಂದರ್ಭದಲ್ಲಿ ಸೂಚನೆ ನೀಡಿದೆ.
Related Articles
Advertisement
ಶಾಸಕರು ರಾಜೀನಾಮೆ ನೀಡಿ ಇಷ್ಟು ದಿನ ಕಳೆದರೂ ಸ್ಪೀಕರ್ ರಾಜೀನಾಮೆ ಯಾಕೆ ಸ್ವೀಕರಿಸಿಲ್ಲ. ನಾವು ಸ್ಪೀಕರ್ ಅವರ ಕಾರ್ಯವ್ಯಾಪ್ತಿಯನ್ನು ಪ್ರಶ್ನಿಸುವುದಿಲ್ಲ. ಆದರೆ ನೀವು ನಿಮ್ಮ ಅನುಕೂಲತೆಗೆ ತಕ್ಕಂತೆ ನಮ್ಮನ್ನು ಪ್ರಶ್ನಿಸುವಂತಿಲ್ಲ ಎಂದು ಸಿಜೆಐ ಅಭಿಪ್ರಾಯವ್ಯಕ್ತಪಡಿಸಿದ್ದರು.
ಭೋಜನ ವಿರಾಮದ ನಂತರ ಸಿಎಂ ಕುಮಾರಸ್ವಾಮಿ ಪರ ವಕೀಲರಾದ ರಾಜೀವ್ ಧವನ್ ವಾದ ಮಂಡಿಸಿ, ಶಾಸಕರು ಸಚಿವರಾಗುವ ಆಮಿಷಕ್ಕೊಳಗಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ. ಗುರುವಾರ ಅಧಿವೇಶನ ನಡೆಯಲಿದ್ದು, ಅಂದು ಹಣಕಾಸು ವಿಧೇಯಕ ಮಂಡನೆಯಾಗಲಿದೆ. ಇಂತಹ ಸಂದರ್ಭದಲ್ಲಿ ಶಾಸಕರು ಸರ್ಕಾರವನ್ನು ಬೀಳಿಸುವ ಯೋಜನೆ ರೂಪಿಸಿದ್ದಾರೆ. ಹೀಗಾಗಿ ಇಂತಹ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಬಾರದು ಎಂದು ವಾದ ಮಂಡಿಸಿದ್ದರು.
ಸುದೀರ್ಘವಾಗಿ ವಾದ, ಪ್ರತಿವಾದ ಆಲಿಸಿದ ಸಿಜೆಐ ನೇತೃತ್ವದ ಸುಪ್ರೀಂಕೋರ್ಟ್ ಪೀಠ ತೀರ್ಪನ್ನು ಕಾಯ್ದಿರಿಸಿದ್ದು, ಬುಧವಾರ ಬೆಳಗ್ಗೆ 10-30ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.