Advertisement

ಉನ್ನಾವ್ ರೇಪ್ ಕೇಸ್; 5 ಪ್ರಕರಣ ದೆಹಲಿಗೆ ವರ್ಗಾ, 25 ಲಕ್ಷ ಪರಿಹಾರ ಕೊಡಿ; ಸುಪ್ರೀಂಕೋರ್ಟ್

09:29 AM Aug 02, 2019 | Team Udayavani |

ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರನ ಹಾಗೂ ಇದಕ್ಕೆ ಸಂಬಂಧಿಸಿದ ಐದು ಪ್ರಕರಣಗಳನ್ನು ದೆಹಲಿ ಕೋರ್ಟ್ ಗೆ ವರ್ಗಾಯಿಸಿರುವ ಸುಪ್ರೀಂಕೋರ್ಟ್ 45 ದಿನದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಗುರುವಾರ ಆದೇಶ ನೀಡಿದೆ.

Advertisement

ಅಲ್ಲದೇ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಸುಪ್ರೀಂಕೋರ್ಟ್ ಉತ್ತರಪ್ರದೇಶ ಸರಕಾರಕ್ಕೆ ನಿರ್ದೇಶನ ನೀಡಿದೆ.

ಉನ್ನಾವ್ ರೇಪ್ ಸಂತ್ರಸ್ತೆ ಅಪಘಾತ ಪ್ರಕರಣವನ್ನು ಸಿಬಿಐ 14 ದಿನದೊಳಗೆ ಮುಕ್ತಾಯಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ ಎಂದು ವರದಿ ತಿಳಿಸಿದೆ.

ಸಂತ್ರಸ್ತೆ ಕುಟುಂಬದವರು ಒಂದು ವೇಳೆ ಸಂತ್ರಸ್ತೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಏಮ್ಸ್ ಗೆ ಸ್ಥಳಾಂತರಿಸಬಹುದಾಗಿದೆ ಎಂದು ಸುಪ್ರೀಂ ಪೀಠ ಹೇಳಿದೆ. ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಐದು ಪ್ರಕರಣಗಳ ವಿಚಾರಣೆಯನ್ನು ಸಿಜೆಐ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ದೆಹಲಿಗೆ ವರ್ಗಾಯಿಸಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next