Advertisement

ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ ಲಭ್ಯ

01:00 AM Jul 06, 2022 | Team Udayavani |

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಸ್ಕ್ಯಾನ್‌ ಪ್ರತಿಗಳು ಜು. 6ರಿಂದ ಪಿಯು ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿವೆ.

Advertisement

ಜೂ. 18ರಂದು ಫ‌ಲಿತಾಂಶ ಪ್ರಕಟವಾಗಿದ್ದು, ಜೂ. 30ರ ವರೆಗೆ ಸ್ಕ್ಯಾನ್‌ ಪ್ರತಿ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಸ್ಕ್ಯಾನ್‌ ಪ್ರತಿಯನ್ನು ವೆಬ್‌ಸೈಟ್‌ನಲ್ಲಿ ಹಂತ ಹಂತವಾಗಿ ಅಪ್‌ಲೋಡ್‌ ಮಾಡಲಾಗುತ್ತದೆ. ಮಾಹಿತಿಯನ್ನು ವಿದ್ಯಾರ್ಥಿಗಳ ಮೊಬೈಲ್‌ಗೆ ಸಂದೇಶ ರವಾನೆ ಮಾಡಲಾಗುತ್ತದೆ.

ಸಂದೇಶ ಸ್ವೀಕರಿಸಿದ ವಿದ್ಯಾರ್ಥಿಗಳು ಸ್ಕ್ಯಾನ್‌ ಪ್ರತಿಯನ್ನು https://puc.karnataka.gov.in ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಮರು ಮೌಲ್ಯಮಾಪನ ಮತ್ತು ಅಂಕಗಳ ಮರು ಎಣಿಕೆಗೆ ಜು. 7ರಿಂದ 13ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರೂ.ಗಳನ್ನು ನಿಗದಿ ಮಾಡಲಾಗಿದೆ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next