ಮಂಗಳೂರು: ಕೋವಿಡ್-19 ಮಹಾಮಾರಿಯ ಈ ಸಂಕಷ್ಟದ ಕಾಲದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆಗೆ ತತ್‌ಕ್ಷಣ ಸ್ಪಂದಿಸಿ ಅವರಿಗೆ ಬೇಕಾದ ಆಹಾರ ಕಿಟ್‌ಗಳನ್ನು ಒದಗಿಸಿದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸೇವಾ ಕಾರ್ಯ ಶ್ಲಾಘನೀಯ ಹಾಗೂ ಮಾದರಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ನಗರದ ಕೊಡಿಯಾಲ್‌ಬೈಲ್ ಎಸ್‌ಸಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಬುಧವಾರ ನಡೆದ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಹಾಗೂ ನವೋದಯ ಪ್ರೇರಕರಿಗೆ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು.
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಆಶಾ ಕಾರ್ಯಕರ್ತೆಯರು ದೇವರು ಮೆಚ್ಚುವಂತಹ ಕೆಲಸ ಮಾಡುತ್ತಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಾಡುತ್ತಿರುವ ಕೆಲಸ ಸಮಾಜಕ್ಕೆ ಮಾದರಿ ಎಂದರು.
ರಾಜ್ಯದ ಸಹಕಾರಿ ಸಂಸ್ಥೆಗಳು ತಮ್ಮ ಲಾಭಾಂಶದಲ್ಲಿ ಶೇ. 2ರಷ್ಟನ್ನು ಶಿಕ್ಷಣ ನಿಧಿಗೆ ನೀಡುತ್ತಿವೆ. ಆರ್ಥಿಕ ಸಂಕಷ್ಟದ ಈ ಸಂದರ್ಭ ಶೇ. 2 ನಿಧಿಯಲ್ಲಿ ಶೇ. 1 ನಿಧಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಡೆದುಕೊಳ್ಳಲು ರಾಜ್ಯ ಸರಕಾರ ಮುಂದಾಗಬೇಕು. ಈ ಬಗ್ಗೆ ಅಧ್ಯಾದೇಶ ಹೊರಡಿಸಬೇಕು. ಶೇ. 1ರಷ್ಟು ನಿಧಿಯನ್ನು ಸರಕಾರ ಪಡೆದುಕೊಂಡರೆ 100 ಕೋಟಿ ರೂ.ಗೂ ಹೆಚ್ಚು ಹಣ ಸರಕಾರದ ಪರಿಹಾರ ನೆರವಿಗೆ ದೊರೆಯಲಿದೆ. ಈ ಹಣವನ್ನು ಅಗತ್ಯ ಸೇವೆಗಳಿಗೆ ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ| ವೈ.ಭರತ್ ಶೆಟ್ಟಿ, ಐವನ್ ಡಿ’ಸೋಜಾ, ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ವಾದಿರಾಜ್ ಎಂ. ಶೆಟ್ಟಿ, ಶಶಿಕುಮಾರ್ ರೈ ಬಾಲೊÂಟ್ಟು, ಎಸ್.ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ, ಹರೀಶ್ಚಂದ್ರ, ಜೈರಾಜ್ ಬಿ. ರೈ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್ ಬಿ. ನಾಯಕ್, ಸಿಇಒ ರವೀಂದ್ರ ಬಿ., ಮಹಾ ಪ್ರಬಂಧಕ ಗೋಪಿನಾಥ್ ಭಟ್ ಉಪಸ್ಥಿತರಿದ್ದರು.
3,500ಕ್ಕೂ ಅಧಿಕ ಆಶಾ ಕಾರ್ಯಕರ್ತೆ
ಯರಿಗೆ ಹಾಗೂ ನವೋದಯ ಪ್ರೇರಕರಿಗೆ ಆಹಾರ ಕಿಟ್ ವಿತರಿಸುವ ಉದ್ದೇಶವಿದ್ದು, ಬುಧವಾರ ಎಸ್‌ಸಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸುಮಾರು 15 ಮಂದಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು.
ಪ್ರೋತ್ಸಾಹ ಧನ
ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಆಶಾ ಕಾರ್ಯಕರ್ತೆಯರು ಅಪದಾºಂಧವರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಈ ಕಾರಣಕ್ಕಾಗಿ ಅವರೆಲ್ಲರಿಗೆ ಆಹಾರ ಕಿಟ್ ಒದಗಿಸುವ ಜತೆಯಲ್ಲಿ ಪ್ರತಿಯೊಬ್ಬರಿಗೂ ತಲಾ 1 ಸಾವಿರ ರೂ. ಪ್ರೊತ್ಸಾಹ ಧನ ನೀಡಲು ನಿರ್ಧರಿಸಿದ್ದೇವೆ ಎಂದು ಘೋಷಿಸಿದರು.