ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಆದ್ಯತೆ ನೀಡಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನಾ ಸಮಿತಿ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿಳಿಸಿದರು.
Advertisement
ಅವರು ಬುಧವಾರ ಜಿಪಂದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಪರಿಶೀಲನೆ ಮಾಡಿ ಉತ್ತರ ಕರ್ನಾಟಕದ ಗದಗ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಿಗೆ ಹೊಲಿಸಿದಾಗ ಜಿಲ್ಲೆಯಲ್ಲಿ ಪ್ಲೋರೈಡ್‌ಯುಕ್ತ ನೀರು ಮತ್ತು ನೀರಿನಿಂದ ಹರಡುವ ರೋಗಗಳ ಪ್ರಮಾಣ ಕಡಿಮೆ ಇದ್ದು ಮುಂಜಾಗೃತ ಕ್ರಮವಾಗಿ ಜಿಲ್ಲೆಗೆ ಒದಗಿರುವ ಅನುದಾನದಲ್ಲಿ 37ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ಮತ್ತು ಕುಡಿಯುವ ನೀರಿಗಾಗಿ ಲಕ್ಷಾನುಗಟ್ಟಲೆ ಖರ್ಚು ಮಾಡಿ ಹೊಸ ಬೋರವೆಲ್ ಕೊರೆಯುವ ಬದಲು ಸವಳು ನೀರು ಇರುವ ಬೋರವೆಲ್‌ಗೆ ಮರು ಪೂರಣ ಮಾಡುವ ವ್ಯವಸ್ಥೆ ಮಾಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನೀರು ಶುದ್ಧಿಕರಣ 2 ಘಟಕಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರೊಂದಿಗೆ ನ.28 ರಂದು ನಡೆಯವ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳಿಂದ ಮಾಹಿತಿ ಪಡೆದು 37 ಶುದ್ಧ ನೀರಿನ ಘಟಕಗಳಿಗಾಗಿ ಸ್ಥಳಗಳನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇಡಿ ಜಿಲ್ಲೆಯಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 24982 ಶೌಚಾಲಯಗಳ ನಿರ್ಮಾಣ ಗುರಿ ಹೊಂದಲಾಗಿತ್ತು. ಆ ಪೈಕಿ 24650 ಶೌಚಾಲಯ ನಿರ್ಮಾಣ ನಿರ್ಮಿಸಿ ಶೇ.98 ರಷ್ಟು ಪ್ರಗತಿ ಸಾಧಿಸುವುದರೊಂದಿಗೆ ನ.30 ರೊಳಗೆ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲಾಯನ್ನಾಗಿಸಲಾಗುವುದು ಎಂದು ಸಿ.ಇ.ಒ ಹೇಳಿದರು.
Related Articles
Advertisement