ಭೋಪಾಲ್: “ಗ್ರಾಮೀಣ ಪ್ರದೇಶದ ಜನರಿಗೆ ತಾವಿರುವ ಹಳ್ಳಿಗಳು, ಹೋಬಳಿಗಳಲ್ಲಿ ತಮ್ಮ ಆಸ್ತಿಪಾಸ್ತಿಗಳ ಮೇಲೆ ತಾವು ಹೊಂದಿರುವ ಕಾನೂನಾತ್ಮಕ ಅಧಿಕಾರವನ್ನು ಸಾಬೀತುಪಡಿಸುವ ದಾಖಲೆಗಳನ್ನು ಸುಲಭವಾಗಿ ಪಡೆಯುವಂತೆ ಮಾಡಲು ಸ್ವಾಮಿತ್ವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ.
ಇದರಿಂದ ಗ್ರಾಮೀಣ ಭಾಗದ ಆರ್ಥಿಕತೆ ಅಭಿವೃದ್ಧಿಗೊಳ್ಳುವುದರ ಜೊತೆಗೆ ಹಳ್ಳಿಗಳ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಧ್ಯಪ್ರದೇಶದ ಹೌರಾ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಸ್ವಾಮಿತ್ವ ಯೋಜನೆಯನ್ನು ಕೇವಲ 10 ತಿಂಗಳ ಅಲ್ಪಾವಧಿಯಲ್ಲೇ ಯಶಸ್ವಿಯಾಗಿ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ, ಅಲ್ಲಿನ ಅಧಿಕಾರಿಗಳು ಹಾಗೂ ಫಲಾನುಭವಿಗಳ ಜೊತೆಗೆ ವರ್ಚುವಲ್ ಸಭೆ ನಡೆಸಿದ ಮೋದಿ ಈ ವಿಚಾರ ತಿಳಿಸಿದ್ದಾರೆ.
ಇದನ್ನೂ ಓದಿ:ಉತ್ತರಾಖಂಡದಲ್ಲಿರುವ ಚಾರ್‌ಧಾಮ್‌ಗೆ ಇ-ಪಾಸ್ ಕಡ್ಡಾಯ
ಸ್ವಾಮಿತ್ವ ಯೋಜನೆಯನ್ನು ಕೆಲವು ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತರಲಾಗಿದೆ. ಇದರ ಫಲಿತಾಂಶದ ನಂತರ ದೇಶವ್ಯಾಪಿ ಇದು ಜಾರಿಗೊಂಡಾಗ ಗ್ರಾಮ ಸ್ವರಾಜ್ಯಕ್ಕೆ ಹೊಸ ಇಂಬು ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ಹೌರಾ ಜಿಲ್ಲೆಯ ಸ್ವಾಮಿತ್ವ ಫಲಾನುಭವಿಗಳ ಜೊತೆಗೆ ಪ್ರಧಾನಿ ಮಾತುಕತೆ ನಡೆಸಿ ಅವರಿಗೆ ಶುಭ ಹಾರೈಸಿದರು.