Advertisement
ನಿರ್ಮಾಣ ಕ್ಷೇತ್ರವು ಹಲವು ಸಮಸ್ಯೆಗಳ ಮಧ್ಯೆ ಸಿಲುಕಿದ್ದರೂ ಕ್ರೆಡೈ ತನ್ನ ಸಾಮಾಜಿಕ ಕಳಕಳಿಯನ್ನು ಮರೆಯದೆ ಶಾಲೆಗಳ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಂಸ್ಥೆಯು ಅಂಗನವಾಡಿ ಕಟ್ಟಡ, ಶೌಚಾಲಯಗಳ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಘಟಕಾಧ್ಯಕ್ಷ ಡಿ.ಬಿ. ಮೆಹ್ತಾ ಮಾತನಾಡಿ, ಸಂಸ್ಥೆಯು ತನ್ನ ಕಚೇರಿಯ ಬಾಡಿಗೆ ಶುಲ್ಕವನ್ನು ಸಾಮಾಜಿಕ ಸೇವಾ ಕಾರ್ಯಗಳಿಗೆ ಬಳಕೆ ಮಾಡುತ್ತಿದೆ. ಕಳೆದ 2 ವರ್ಷಗಳಲ್ಲಿ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ, ಆರೋಗ್ಯ ಕಾರ್ಡ್ಗಳನ್ನು ವಿತರಿಸಲಾಗಿದೆ. ಈ ವರ್ಷ 25 ಮಂದಿಗೆ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದ್ದು, ಮುಂದಿನ 5 ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 500 ದಾಟಲಿದೆ. ಪ್ರಸ್ತುತ ವಿದ್ಯಾರ್ಥಿವೇತನ ವಿತರಿಸಿದ ವಿದ್ಯಾರ್ಥಿಗಳಿಗೆ ಮುಂದಿನ ವರ್ಷಗಳಲ್ಲಿಯೂ ವೇತನ ವಿತರಿಸಲಾಗುವುದು. ಜತೆಗೆ ಕಾರ್ಮಿಕರಿಗೆ ಕೌಶಲಾಭಿವೃದ್ಧಿ ತರಬೇತಿಯನ್ನೂ ನೀಡಲಾಗಿದೆ. ಸರಕಾರಿ ಶಾಲೆಗಳಿಗೆ ಕಟ್ಟಡ, ಸ್ಮಾರ್ಟ್ ಕ್ಲಾಸನ್ನೂ ನಿರ್ಮಿಸಲಾಗಿದೆ ಎಂದರು. ಮೇಯರ್ ಕವಿತಾ ಸನಿಲ್ ಶುಭ ಹಾರೈಸಿದರು. ಕ್ರೆಡೈ ಕರ್ನಾಟಕದ ಉಪಾಧ್ಯಕ್ಷ ಪುಷ್ಪರಾಜ್ ಜೈನ್, ಮಂಗಳೂರು ಘಟಕದ ಕೋಶಾಧಿಕಾರಿ ಡಾ| ಎರಲ್ ಪಿಂಟೊ, ಜತೆ ಕಾರ್ಯದರ್ಶಿ ವಿನೋದ್ ಪಿಂಟೊ ವೇದಿಕೆಯಲ್ಲಿದ್ದರು. ಉಪಾಧ್ಯಕ್ಷ ಸಿರಾಜ್ ಅಹ್ಮದ್ ಸ್ವಾಗತಿಸಿದರು. ಕಾರ್ಯದರ್ಶಿ ನವೀನ್ ಕರ್ಡೊಝಾ ವಂದಿಸಿದರು. ಮ್ಯಾನೇಜರ್ ರಾಜಶೇಖರ್ ನಿರ್ವಹಿಸಿದರು.