Advertisement

ಶಾಲೆ ಮಾನ್ಯತೆ ನವೀಕರಣ ಕಾಲಮಿತಿ ಹೆಚ್ಚಳಕ್ಕೆ ಆಗ್ರಹ

12:33 PM May 18, 2020 | Suhan S |

ಹುಬ್ಬಳ್ಳಿ: ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಪ್ರಮುಖರು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಅನುದಾನ ರಹಿತ ಶಾಲೆಗಳ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

Advertisement

ಪ್ರತಿವರ್ಷ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣ ಮಾಡುವುದು ಅವೈಜ್ಞಾನಿಕವಾಗಿದ್ದು ಭ್ರಷ್ಟಾಚಾರಕ್ಕೆ ಅನುಕೂಲ ಮಾಡಿಕೊಟ್ಟಂತಾಗಿದೆ. ಅದನ್ನು ಪ್ರತಿ ಐದು ವರ್ಷಕ್ಕೊಮ್ಮೆ ಅಥವಾ ಹತ್ತು ವರ್ಷಕ್ಕೊಮ್ಮೆ ಮಾನ್ಯತೆ ನವೀಕರಣ ಮಾಡಬೇಕು. ಸೇವಾ ಭದ್ರತೆಯ ವಿಷಯದಲ್ಲಿ ಅನುದಾನ ರಹಿತ ಶಾಲೆಗಳು ಈಗಾಗಲೇ ಆರ್ಥಿಕ ಪರಿಸ್ಥಿತಿಯಿಂದ ತೊಂದರೆ ಅನುಭವಿಸುತ್ತಿದ್ದು, ಸರ್ಕಾರ ನಿರ್ಧರಿಸಿದಂತೆ ಶಾಲಾ ಶಿಕ್ಷಕರಿಗೆ ವೇತನ ಕೊಡುವುದಾದರೆ ನಾವುಗಳು ಶಾಲೆಗಳನ್ನು ಬಂದ್‌ ಮಾಡಬೇಕಾಗಬಹುದು. ನಮ್ಮಲ್ಲಿ ಹೆಚ್ಚಾಗಿ ಬಡವರು ಹಾಗೂ ಮಧ್ಯಮ ವರ್ಗದವರ ವಿದ್ಯಾರ್ಥಿಗಳು ಇರುವುದರಿಂದ ಶಾಲೆಗೆ ಮಕ್ಕಳು ಬರುವುದು ಕಷ್ಟವಾಗುತ್ತದೆ. ಆದ್ದರಿಂದ ಸೇವಾ ಭದ್ರತೆ ವಿಷಯದಲ್ಲಿ ಆಡಳಿತ ಮಂಡಳಿಗಳಿಗೆ ಅಧಿಕಾರ ಬಿಟ್ಟುಕೊಡಬೇಕು, ರಾಜ್ಯಮಟ್ಟದ ಸಮಿತಿ ರಚಿಸಿ ಅದರಲ್ಲಿ ಉತ್ತರ ಕರ್ನಾಟಕದ ಆಡಳಿತ ಮಂಡಳಿಯವರಿಗೆ ಅವಕಾಶ ಮಾಡಿಕೊಡಬೇಕು ಎಂಬಿತ್ಯಾದಿ ವಿಷಯಗಳ ಕುರಿತು ಚರ್ಚಿಸಲಾಯಿತು.

ಇದಕ್ಕೆ ಸ್ಪಂದಿಸಿದ ಹೊರಟ್ಟಿ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದರು. ಜೊತೆಗೆ ಬೆಂಗಳೂರಿನಲ್ಲಿ ನಡೆಯುವ ಮುಖ್ಯಮಂತ್ರಿಗಳ ಸಭೆಯಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು. ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಅಧ್ಯಕ್ಷ ಜಯಪ್ರಕಾಶ ತೆಂಗಿನಕಾಯಿ, ಉಪಾಧ್ಯಕ್ಷ ಲಿಂಗರಾಜ ಪಾಟೀಲ, ಕಾರ್ಯದರ್ಶಿ ಬಾಬಜಿ ಹಾಗೂ ಮಹೇಂದ್ರ ಸಿಂಘಿ, ಸುವರ್ಣಲತಾ, ರಾಜಾ ದೇಸಾಯಿ, ಹನುಮರೆಡ್ಡಿ, ಮೇಚೆಣ್ಣವರ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next