Advertisement
ಪಟ್ಟಣದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ 15 ಕೋಣೆಗಳು ಶಿಥಿಲಗೊಂಡಿದ್ದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ದಿನ ನಿತ್ಯ ಭೀತಿ ಎದುರಿಸುವಂತಾಗಿದೆ. 1959ರಲ್ಲಿ ಸುಮಾರು 11826 ಚದರ ಅಡಿ ವಿಸ್ತಾರದಲ್ಲಿ 15 ಕೋಣೆಗಳ ಶಾಲಾ ಕಟ್ಟಡ ನಿರ್ಮಾಣಗೊಂಡಿದೆ. ಈ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ 220 ವಿದ್ಯಾರ್ಥಿಗಳಿದ್ದಾರೆ. ಶಾಲಾ ಕಟ್ಟಡವು ಸುಮಾರು 60 ವರ್ಷಗಳ ಹಳೆಯದಾದ ಕಾರಣ ಕಟ್ಟಡದ ಮೇಲ್ಛಾವಣಿ ಶಿಥಿಲಗೊಂಡಿದ್ದು ಸ್ವಲ್ಪ ಮಳೆ ಬಂದರು ಕೂಡ ತರಗತಿ ಕೋಣೆಗಳು ಸೋರುತ್ತವೆ. ಗೋಡೆಗಳ ಮತ್ತು ಚಾವಣಿಯ ಸಿಮೆಂಟ್ ಪದರು ಕೆಲವೊಮ್ಮೆ ಶಾಲಾವಧಿಯಲ್ಲಿಯೇ ಉದುರಿ ಬೀಳುತ್ತಿದೆ. ಅಲ್ಲದೇ ಕಬ್ಬಿಣದ ಕಂಬಿಗಳು ಹೊರಗಡೆ ಕಾಣುತ್ತಿವೆ. 15 ಕೋಣೆಗಳಲ್ಲಿ 4 ಕೋಣೆಗಳು ಸ್ವಲ್ಪ ಉತ್ತಮವಾಗಿವೆ. ಉಳಿದ 08 ಕೋಣೆಗಳು ಶಿಥಿಲಗೊಂಡಿವೆ. ಅದರಲ್ಲಿ 3 ಕೋಣೆಗಳು ಸಂಪೂರ್ಣ ಶಿಥಿಲಗೊಂಡು ತರಗತಿ ನಡೆಸಲು ಯೋಗ್ಯವಾಗಿರದೆ ಇರುವುದರಿಂದ ಅವುಗಳನ್ನು ಮುಚ್ಚಲಾಗಿದೆ.
Related Articles
Advertisement
ಈ ಭಾಗದಲ್ಲಿ ಮಾದರಿ ಶಾಲೆ ಎಂಬ ಖ್ಯಾತಿ ಪಡೆದುಕೊಂಡು ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ನೀಡಿದಂತಹ ಶಾಲೆ ಇಂದು ಶಿಥಿಲಾವಸ್ಥೆ ತಲುಪಿರುವುದು ರ್ದುದೈವದ ಸಂಗತಿಯಾಗಿದೆ. ದಯವಿಟ್ಟು ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು, ಮತ್ತು ಗ್ರಾಮದ ಮುಖಂಡರು ನೂತನ ಕಟ್ಟಡವನ್ನು ನಿರ್ಮಿಸಲು ಸಹಾಯ ಸಹಕಾರ ನೀಡಬೇಕು.-ಬಸವರಾಜ ನಾಯಕ ಸೈದಾಪುರ ಎಸ್‍ಡಿಎಂಸಿ ಅಧ್ಯಕ್ಷ
-ಭೀಮಣ್ಣ ಬ ವಡವಟ್